ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿ

Posted By:

2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್ಲ್ಲೈನ್ ಮೂಲಕ ಅಂಕ ಮಾಹಿತಿ ನಮೂದಿಸಲು ಸೂಚಿಸಿದೆ.

ಸೌತ್ ಇಂಡಿಯನ್ ಬ್ಯಾಂಕ್: ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿ

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿಲ್ಲ, ಬದಲಾಗಿ ಅಭ್ಯರ್ಥಿಗಳು ತಾವು ಪದವಿಯಲ್ಲಿ ಗಳಿಸಿರುವ ಅಂಕಗಳ ಮತ್ತು ಪ್ರವರ್ಗವಾರು ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.

ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

ಈಗಾಗಲೇ ಐ.ಎ.ಎಸ್/ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಬ್ಯಾಂಕಿಂಗ್ ತರಬೇತಿ ಪಡೆಯಲು ಅವಕಾಶವಿರುವುದಿಲ್ಲ.

ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತರಬೇತಿಗಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮಾತ್ರ ತಾವು ಪದವಿಯಲ್ಲಿ ಗಳಿಸಿರುವ ಅಂಕಗಳ ಮಾಹಿತಿಯನ್ನು ಆನ್-ಲೈನ್ ಮೂಲಕ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

ಪದವಿ ಅಂಕಪಟ್ಟಿಗಳ ಒಂದು ಸೆಟ್ ದೃಢೀಕೃತ ಮತ್ತು ಮೂಲ ಪ್ರತಿಗಳೊಂದಿಗೆ ಅಭ್ಯರ್ಥಿಗಳು ತಮ್ಮ ಸ್ವಂತ ಜಿಲ್ಲೆಯಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಹಾಜರಾಗಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು.

ದಾಖಲೆಗಳ ಪರಿಶೀಲನೆ ನಂತರ ಒಂದು ಸೆಟ್ ದೃಢೀಕೃತ ಪ್ರತಿಯನ್ನು ಮಾತ್ರ ಸದರಿ ಕಛೇರಿಯಲ್ಲಿ ನೀಡುವುದು ಮತ್ತು ಮೂಲ ಪ್ರತಿಗಳನ್ನು ಸ್ಥಳದಲ್ಲಿಯೇ ಹಿಂದಿರುಗಿ ಪಡೆಯಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು

  • ಮಾಹಿತಿ ಮತ್ತು ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಲು ಕೊನೆಯ ದಿನಾಂಕ: 27-12-2017
  • ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಲು ಕೊನೆಯ ದಿನಾಂಕ:28-12-2017

ಮಾಹಿತಿಯನ್ನು ಅಪ್ಲೋಡ್ ಮಾಡದ ಅಭ್ಯರ್ಥಿಗಳನ್ನು 2017-18ನೇ ಸಾಲಿಗೆ ಇಲಾಖೆಯಿಂದ ನೀಡುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 080-65970004 (ಕಛೇರಿ ಕಾರ್ಯನಿರ್ವಹಿಸುವ ದಿನಗಳು ಮತ್ತು ಸಮಯದಲ್ಲಿ ಮಾತ್ರ)

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Department of backward classes welfare banking exam training, candidates to upload their marks card details in the website before December 27.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia