2019-20ನೇ ಸಾಲಿಗೆ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

2019-20ನೇ ಸಾಲಿಗೆ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು IIM,IIT,IISc,IIITs, NITs, IISERs, AIIMS, NLU,ISM,IIP,ISI,JIPMER,SPA ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೊತ್ಸಾಹಧನಕ್ಕಾಗಿ ಆನ್‌-ಲೈನ್ ಮೂಲಕ ನಬೆಂಬರ್ 30,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 15,2019ರ ವರೆಗೆ ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2 ಲಕ್ಷ ರೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ..

ವಿದ್ಯಾರ್ಥಿಗಳಿಗೆ ಸೂಚನೆಗಳು:

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅವಕಾಶವಿರುವುದಿಲ್ಲ.

* ವಿದ್ಯಾರ್ಥಿಯು ಭಾರತ ದೇಶದ ಪ್ರಜೆಯಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

* ಕೇಂದ್ರ/ರಾಜ್ಯ ಸರ್ಕಾರದ/ ಅನುದಾನಿತ ಸಂಸ್ಥೆಗಳ /ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತು ಧನಸಹಾಯ ಪಡೆಯಲು ಅರ್ಹರಲ್ಲ.

* ವಿದ್ಯಾರ್ಥಿಯು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು.

* ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಳನ್ನು ಮೀರಿರಬಾರದು. ಆರ್ಥಿಕವಾಗಿ ಹಿಂದುಳಿದ, ವಾರ್ಷಿಕವಾಗಿ ರೂ.6.00 ಲಕ್ಷಗಳಿಗಿಂತ ಕಡಿಮೆ ಆದಾಯ ಹೊಂದಿರುವ ಸಾಮಾನ್ಯ ವಿದ್ಯಾರ್ಥಿಗಳು ಸಹ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.

* 2019-20ನೇ ಸಾಲಿನಲ್ಲಿ IIM,IIT,IISc,IIITs,NITs,IISERs,AIIMS,NLU,ISM,IIP,ISI,JIPMER, SPA ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಯಾವುದಾದರೊಂದು ಸಂಸ್ಥೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪೂರ್ಣಾವಧಿ ಪಿಹೆಚ್‌.ಡಿ ಹಾಗಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸದರಿ ಕಾರ್ಯಕ್ರಮದಡಿ ಸೌಲಭ್ಯ ಒದಗಿಸುವುದು.

* IIM,IIT,IISc,IIITs,NITs,IISERs,AIIMS,NLU,ISM,IIP,ISI,JIPMER, SPA ಸಂಸ್ಥೆಗಳಲ್ಲಿ ಡಿಪ್ಲೋಮಾ ಪಿಜಿ ಡಿಪ್ಲೋಮಾ ಹಾಗೂ ಇತರೆ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ಧನ ಸಹಾಯ ಪಡೆಯಲು ಅವಕಾಶ ಇರುವುದಿಲ್ಲ.

ಆಯ್ಕೆ ವಿಧಾನ:

ವಿದ್ಯಾರ್ಥಿಯು ಕಚೇರಿಗೆ ಸಲ್ಲಿಸಿದ ದಾಖಲೆಗಳ ಪರಿಶೀಲನೆ ಮಾಡಲಾಗುವುದು ಮತ್ತು ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳನ್ನು ಅವರ ಹಿಂದಿನ ವರ್ಷದ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳು / ಗ್ರೇಡ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

* ಆಯ್ಕೆಯಾದ ವಿದ್ಯಾರ್ಥಿಗಳಿಗೆ 2.00 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಾವು ಸಲ್ಲಿಸಿರುವ ಆನ್‌ಲೈನ್ ಅರ್ಜಿ ಪ್ರತಿ ಹಾಗೂ ಅಪ್‌ಲೋಡ್ ಮಾಡಿರುವ ಎಲ್ಲಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ತಮ್ಮ ಸ್ವಂತ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಿ ಮೂಲಕ ದಾಖಲೆಗಳನ್ನು ಹಾಜರುಪಡಿಸಿ ಪರಿಶೀಲಿಸಿಕೊಳ್ಳತಕ್ಕದ್ದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 15,2019 ಸಂಜೆ 5:00 ಗಂಟೆ

ಸಹಾಯವಾಣಿ ಸಂಖ್ಯೆ: 8050770004

ವೆಬ್‌ಸೈಟ್‌: http://backwardclasses.kar.nic.in/BCWDHome.aspx
ಇ-ಮೇಲ್: [email protected]

ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
epartment of backward classes invites applications for one time scholarship from IIM,IIT,IISc,IIITs,NITs, AIIMS Students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X