ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುಲಾಗುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 10,2019ರ ವರೆಗೆ ವಿಸ್ತರಿಸಲಾಗಿದೆ.
ಈ ಮುಂಚೆ ಅಕ್ಟೋಬರ್ 31ರ ವರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 10,2019ರ ವರೆಗೆ ವಿಸ್ತರಿಸಲಾಗಿದೆ.

2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ","ಶುಲ್ಕ ವಿನಾಯಿತಿ", ವಿದ್ಯಾಸಿರಿ "ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ :
ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ತಾಂತ್ರಿಕ ಕೋರ್ಸುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಹೊಸ ವಿದ್ಯಾರ್ಥಿಗಳು:
ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ / ಶುಲ್ಕ ವಿನಾಯಿತಿ /ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಸರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಒಂದೇ ಅರ್ಜಿ ಸಲ್ಲಿಸಬೇಕು.
ನವೀಕರಣ ವಿದ್ಯಾರ್ಥಿಗಳು:
ಈಗಾಗಲೇ 2018-19ನೇ ಸಾಲಿನಲ್ಲಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ನಮೂದಿಸಿ 2019-20ನೇ ಸಾಲಿಗೆ ನವೀಕರಣ ಅರ್ಜಿಯನ್ನು ಸಲ್ಲಿಸಬೇಕು.
ವಾರ್ಷಿಕ ಆದಾಯ ಮಿತಿ:
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಈ ಕೆಳಗಿನಂತಿರಬೇಕು.
ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ: ರೂ.2.50 ಲಕ್ಷ ಮೀರಿರಬಾರದು
ವರ್ಗ-2ಎ,3ಎ,3ಬಿ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಕೆ:
ವಿದ್ಯಾರ್ಥಿವೇತನ ಬಯಸುವ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸೂಕ್ತ ದಾಖಲೆಗೊಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುತಕ್ಕದ್ದು.
ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಶುಲ್ಕವಿನಾಯಿತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ವೆಬ್‌ಸೈಟ್ ನಲ್ಲಿಯೇ ಅರ್ಜಿ ಸಲ್ಲಿಸುವುದು. (ಪಿ.ಹೆಚ್.ಡಿ ಫೆಲೋಶಿಪ್‌ಗೆ ಪ್ರತ್ಯೇಕವಾಗಿ ಅರ್ಜಿಯನ್ನು ಆಹ್ವಾನಿಸಲಾಗುವುದು).
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ: 5.10.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.11.2019
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ದಾಖಲೆಗಳು:
ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ
ಹಿಂದಿನ ತರಗತಿಯಲ್ಲಿ ಅಭ್ಯಾಸ ಮಾಡಿದ ಅಂಕ ಪಟ್ಟಿಯ ಪ್ರತಿ
ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ಪ್ರತಿ
ರಾಷ್ಟ್ರೀಕೃತ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ
ಆಧಾರ್ ಕಾರ್ಡ್ ಪ್ರತಿ
ರೇಷನ್ ಕಾರ್ಡ್ ಪ್ರತಿ
ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಪ್ರಸಕ್ತ ವರ್ಷದ ದಾಖಲಾತಿ ಸಂಖ್ಯೆ
ಕಾಲೇಜು ಪ್ರಾರಂಭವಾದ ದಿನಾಂಕ ಶಾಲೆಯಿಂದ ಕಾಲೇಜಿಗೆ ಇರುವ ಅಂತರ (ಕಿ.ಮೀ)
ಹೆಚ್ಚಿನ ಮಾಹಿತಿಗಾಗಿ http://backwardclasses.kar.nic.in/BCWDHome.aspx ಗಮನಿಸಿ.
ಸಹಾಯ ವಾಣಿ: 8050770005/8050770004
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











