ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉಚಿತ ತರಬೇತಿ

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2017 ಆಗಿದೆ.

ಐಎಎಸ್ , ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2017 ಆಗಿದೆ.

ತರಬೇತಿಯ ಅವಧಿ

ಪರೀಕ್ಷಾ ಪೂರ್ವ ತರಬೇತಿ ಹೆಸರುವಿಷಯತರಬೇತಿ ಅವಧಿ
ಐ.ಎ.ಎಸ್ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ 7 ರಿಂದ 9 ತಿಂಗಳು
ಕೆ.ಎ.ಎಸ್ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಕನಿಷ್ಠ 7 ತಿಂಗಳು
ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ಸಮಗ್ರ ವಿಷಯಗಳು
ಕನಿಷ್ಠ 7 ತಿಂಗಳು

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಅರ್ಹತೆ

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿರಬೇಕು.
  • ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.450 ಲಕ್ಷ ಮತ್ತು 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ರೂ.3.50 ಲಕ್ಷ

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ವಯೋಮಿತಿ

ಐಎಎಸ್ ಕೋರ್ಸಿಗೆ

  • ಕೇಂದ್ರದ ಜಾತಿ ಪಟ್ಟಿಗೆ ಒಳಪಡುವ ಅಭ್ಯರ್ಥಿಗಳಿಗೆ: ಕನಿಷ್ಠ 21 ಮತ್ತು ಗರಿಷ್ಠ 34
  • ರಾಜ್ಯ ಜಾತಿ ಪಟ್ಟಿ ಒಳಪಡುವ ಅಭ್ಯರ್ಥಿಗಳಿಗೆ:ಕನಿಷ್ಠ 21 ಮತ್ತು ಗರಿಷ್ಠ 31
  • ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ 21 ಮತ್ತು ಗರಿಷ್ಠ 41

ಕೆಎಎಸ್ ಕೋರ್ಸಿಗೆ

  • ಕೇಂದ್ರದ ಜಾತಿ ಪಟ್ಟಿಗೆ ಒಳಪಡುವ ಅಭ್ಯರ್ಥಿಗಳಿಗೆ: ಕನಿಷ್ಠ 21 ಮತ್ತು ಗರಿಷ್ಠ 37
  • ರಾಜ್ಯ ಜಾತಿ ಪಟ್ಟಿ ಒಳಪಡುವ ಅಭ್ಯರ್ಥಿಗಳಿಗೆ:ಕನಿಷ್ಠ 21 ಮತ್ತು ಗರಿಷ್ಠ 39
  • ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ 21 ಮತ್ತು ಗರಿಷ್ಠ 44

ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ ಕೋರ್ಸಿಗೆ

  • ಕೇಂದ್ರದ ಜಾತಿ ಪಟ್ಟಿಗೆ ಒಳಪಡುವ ಅಭ್ಯರ್ಥಿಗಳಿಗೆ: ಕನಿಷ್ಠ 21 ಮತ್ತು ಗರಿಷ್ಠ 32
  • ರಾಜ್ಯ ಜಾತಿ ಪಟ್ಟಿ ಒಳಪಡುವ ಅಭ್ಯರ್ಥಿಗಳಿಗೆ:ಕನಿಷ್ಠ 21 ಮತ್ತು ಗರಿಷ್ಠ 29
  • ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಠ 21 ಮತ್ತು ಗರಿಷ್ಠ 39

ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಳ ಆಯ್ಕೆಗೆ ಪ್ರತ್ಯೇಕವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುವುದು.

ಆಯಾ ಪ್ರಾಧಿಕಾರಗಳು ನಿಗದಿಪಡಿಸಿರುವ ಪಠ್ಯಕ್ರಮದನ್ವಯ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುವುದು.

ಪರೀಕ್ಷಾ ಕೇಂದ್ರಗಳು

ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು (ನಗರ), ಮೈಸೂರು, ಧಾರವಾಡ, ಕಲಬುರ್ಗಿ, ಬೆಳಗಾವಿ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲಕ್ಕೆ ನಡೆಸಲಾಗುವುದು.

ಆಯ್ಕೆ ವಿಧಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವರಿಯಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು, ಪ್ರವರ್ಗವಾರು, ಮೀಸಲಾತಿ, ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಹಾಗೂ ಆ ಸಂಸ್ಥೆಗಳಿಗೆ ಸರ್ಕಾರ ನಿಗದಿಪಡಿಸುವ ಭೌತಿಕ ಗುರಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಅವರ ಮೂಲ ದಾಖಲೆಗಳ ಪರಿಶೀಲನೆ ಮಾಡಿದ ನಂತರ ತರಬೇತಿಗಾಗಿ ಕೌನ್ಸಲಿಂಗ್ ಮೂಲಕ ಆಯ್ಕೆ ಮಾಡಿ ನಿಯೋಜಿಸಲಾಗುವುದು.

ಆನ್-ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2017

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ backwardclasses.kar.nic.in ನ್ನು ನೋಡುವುದು.

For Quick Alerts
ALLOW NOTIFICATIONS  
For Daily Alerts

English summary
Free coaching classes for IAS, KAS and Banking PO from department of backward classes welfare.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X