ಫೆ.20 ರಿಂದ ಆರ್‌ಟಿಇ ಅರ್ಜಿ ಸಲ್ಲಿಕೆ ಪ್ರಾರಂಭ

Posted By:

2018-19ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸೀಟುಗಳ ಉಚಿತ ಪ್ರವೇಶದ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಲಾಗಿದೆ.
ಕರ್ನಾಟಕ ಹೈಕೋರ್ಟ್: 101 ಹುದ್ದೆಗಳ ನೇರ ನೇಮಕಾತಿ

ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ದುರ್ಬಲ ವರ್ಗದ ಮಕ್ಕಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಶೇ. 25ರಷ್ಟು ಸೀಟುಗಳನ್ನು ಉಚಿತವಾಗಿ ನೀಡಲಾಗುತ್ತದೆ.
ನೀಟ್ 2018: ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಳ

ಆರ್‌ಟಿಇ 2018

ಅರ್ಜಿ ಪ್ರಕ್ರಿಯೆ ಫೆ.20 ರಿಂದ ಆರಂಭವಾಗಲಿದ್ದು, ಈ ಬಾರಿ ಅಲ್ಪಸಂಖ್ಯಾತವಲ್ಲದ ಅನುದಾನಿತ ಶಾಲೆಗಳಲ್ಲೂ ಆರ್‌ಟಿಇ ಅಡಿಯಲ್ಲಿ ಪ್ರವೇಶ ಕಲ್ಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ಕಳೆದ ವರ್ಷ ಆರ್‌ಟಿಇ ಅಡಿಯಲ್ಲಿ ಒಟ್ಟು 1.29 ಲಕ್ಷ ಸೀಟುಗಳು ಲಭ್ಯವಿದ್ದವು. ಈ ವರ್ಷ ಅನುದಾನಿತ ಶಾಲೆಗಳನ್ನು ಆರ್‌ಟಿಇ ವ್ಯಾಪ್ತಿಗೆ ಸೇರಿಸಿರುವುದರಿಂದ ಸುಮಾರು 15 ಸಾವಿರ ಹೆಚ್ಚುವರಿ ಸೀಟುಗಳು ಲಭ್ಯವಾಗಲಿವೆ.

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 20-02-2018
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-03-2018

ಸೂಚನೆ

ಆರ್‌ಟಿಇ ಅಡಿಯಲ್ಲಿ ಉಚಿತ ಸೀಟಿಗಾಗಿ ಪ್ರವೇಶ ಕೋರುವ ಮಗು, ತಂದೆ ಅಥವಾ ತಾಯಿ ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ಹೊಂದಿರಬೇಕು. ಮಗುವಿನ ಪಾಲಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು ನಗರದಲ್ಲಿ ಬೆಂಗಳೂರು ಒನ್‌, ಇತರೆ ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್‌, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು.

ಮಗುವಿನ ತಂದೆ, ತಾಯಿ ಹಾಗೂ ಪೋಷಕರ ಬಳಿ ಸ್ವಂತ ಮೊಬೈಲ್‌ಫೋನ್‌ ಅಥವಾ ಇಂಟರ್‌ನೆಟ್‌ ಸೌಲಭ್ಯವಿದ್ದಲ್ಲಿ, ಆನ್‌ಲೈನ್‌ ಮೂಲಕವೂ ಅರ್ಜಿ ಹಾಕಬಹುದು.

ದೋಷ ಸರಿಪಡಿಸಲು ಎಸ್‌ಎಂಎಸ್‌

ಆರ್‌ಟಿಇ ಪ್ರವೇಶ ಪ್ರಕ್ರಿಯೆಗಾಗಿ ಇಲಾಖೆಯು ಹೊಸ ತಂತ್ರಾಂಶವನ್ನು ಅಭಿವೃದ್ಪಡಿಸಿದ್ದು, ಈ ತಂತ್ರಾಂಶದಲ್ಲಿ ನೈಜತೆ ತಾಳೆ ಆಗದ, ಅಪೂರ್ಣ ಅಥವಾ ಕ್ರಮಬದ್ಧವಲ್ಲದ ಅರ್ಜಿಗಳ ದೋಷಗಳನ್ನು ಸರಿಪಡಿಸುವಂತೆ, ತಂದೆ, ತಾಯಿ ಅಥವಾ ಪೋಷಕರಿಗೆ ಎಸ್‌ಎಂಎಸ್‌ (ಶಾರ್ಟ್‌ ಮೆಸೇಜ್‌ ಸರ್ವಿಸ್‌) ಕಳುಹಿಸಲು ಇಲಾಖೆ ಕ್ರಮ ಕೈಗೊಂಡಿದೆ.

English summary
The Public Education Department has published the Right to Education Act(RTE) a free admission schedule of 2018-19.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia