Devaraj Urs Pratibha Puraskar Scholarship 2022 : ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

2022ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಲಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ"ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 27,2022 ರಿಂದ ಅಕ್ಟೋಬರ್ 21,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬೇಕಿರುತ್ತದೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕಗಳನ್ನು ಪಡೆದವರಿಗೆ ಗುಡ್ ನ್ಯೂಸ್

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು :

* ಭಾರತದ ಪ್ರಜೆಗಳಾಗಿರಬೇಕು. ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.
* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
* ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರಬೇಕು.
* 2022ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
* ವಿದ್ಯಾರ್ಥಿಯ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಒಬ್ಬ ವಿದ್ಯಾರ್ಥಿಗೆ ಒಂದು ಭಾರಿ ಮಾತ್ರ ಸೌಲಭ್ಯವನ್ನು ಒದಗಿಸಲಾಗುವುದು.
*ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ-
ಪ್ರವರ್ಗ - 1 ಅಭ್ಯರ್ಥಿಗಳ ಆದಾಯ ಮಿತಿ 2.50 ಲಕ್ಷಗಳು
2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ಆದಾಯ ಮಿತಿ 1.00 ಲಕ್ಷ

 

ಪ್ರತಿಭಾ ಪುರಸ್ಕಾರದ ವಿವರ :

ತರಗತಿ - ಪ್ರತಿಭಾ ಪುರಸ್ಕಾರ ನೀಡುವ ಗರಿಷ್ಟ ವಿದ್ಯಾರ್ಥಿಗಳ ಸಂಖ್ಯೆ - ಪ್ರತಿಭಾ ಪುರಸ್ಕಾರದ ಮೊತ್ತ
ಎಸ್‌ಎಸ್‌ಎಲ್‌ಸಿ 1000 10,000
ದ್ವಿತೀಯ ಪಿಯುಸಿ 500 15,000

ವಿದ್ಯಾರ್ಥಿನಿಯರಿಗೆ ಶೇ.33 ಹಾಗೂ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಮೀಸಲಾತಿಯನ್ವಯ ಡಿ.ದೇವರಾಜು ಅರಸು ಪ್ರತಿಭಾ ಪುರಸ್ಕರಾರವನ್ನು ನೀಡಲಾಗುವುದು.

ಸರ್ಕಾರಿ ಶಾಲೆ ಮತ್ತು ಅನುದಾನಿತ/ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಮೀಸಲಾತಿಯನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ :

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcwd.karnataka.gov.in/# ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವಂತೆ ನಿಮ್ಮ ತರಗತಿ, ಪಾಸಾದ ವಿಧಾನ, ಪಾಸಾದ ವರ್ಷ, ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕಗಳನ್ನು ನಮೂದಿಸಿ. ನಂತರ ಅಲ್ಲಿ ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಸಬ್‌ಮಿಟ್ ಮಾಡುವ ಮೂಲಕ ಅಕ್ಟೋಬರ್ 21,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಸರಿಯಾದ/ಪೂರ್ಣ ಮಾಹಿತಿ ಮತ್ತು ದಾಖಲೆಗಳನ್ನು ಸಲ್ಲಿಸದ ವಿದ್ಯಾರ್ಥಿಗಳನ್ನು ಸದರಿ ಪ್ರತಿಭಾ ಪುರಸ್ಕಾರಕ್ಕೆ ಪರಿಗಣಿಸಲಾಗುವುದಿಲ್ಲ.

ವಿದ್ಯಾರ್ಥಿಗಳು ಗಳಿಸಿದ ಅಂಕಗಳು ಹಾಗೂ ಮೀಸಲಾತಿಯನ್ವಯ ನಿಗದಿಪಡಿಸಿದ ಭೌತಿಕ ಗುರಿಗನುಗುಣವಾಗಿ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರವನ್ನು ಮಂಜೂರು ಮಾಡಲಾಗುವುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Backward class welfare department 2022 inviting applications from Backward Classes students those who have secured 90% and above in 2022 SSLC and 2nd PUC examinations.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X