Diksha App For Students : ಕೇಂದ್ರ ಸರ್ಕಾರದ ವಿದ್ಯಾರ್ಥಿ ಸ್ನೇಹಿ ದೀಕ್ಷಾ ಆಪ್ ಲೋಕಾರ್ಪಣೆ

ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ

ರಾಜ್ಯದಲ್ಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರದ ವಿದ್ಯಾರ್ಥಿ ಸ್ನೇಹಿ "ದೀಕ್ಷಾ" ಆಪ್ (DIKSHA app) ಅನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌ ಸುರೇಶ್.ಕುಮಾರ್ ಇಂದು ಲೋಕಾರ್ಪಣೆ ಮಾಡಿದ್ದಾರೆ.

ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ 'ಪರೀಕ್ಷಾ ಅಭ್ಯಾಸ' ಎಂಬ ವಿನೂನತ ಕಾರ್ಯಕ್ರಮವನ್ನು ಅಳವಡಿಸಿ ದೀಕ್ಷಾ ವೇದಿಕೆಯಲ್ಲಿ ಸಚಿವ ಸುರೇಶ್ ಕುಮಾರ್ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಎಸ್.ಇ.ಆರ್.ಟಿ.ಯು 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳಿಗೆ ಸಿದ್ಧತೆ ಮಾಡುವುದಕ್ಕಾಗಿ "ಫೋಕಸ್" ಎಂಬ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಾಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೊತ್ತರಗಳು ಆ್ಯಪ್ ನಲ್ಲಿ ದೊರೆಯಲಿವೆ ಎಂದಿದ್ದಾರೆ.

ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಈ ಆಪ್‌ ಉತ್ತಮವಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇದನ್ನು ಪ್ರಥಮವಾಗಿ ಜಾರಿಗೊಳಿಸುತ್ತಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

For Quick Alerts
ALLOW NOTIFICATIONS  
For Daily Alerts

English summary
Diksha app released for sslc, puc and competitive exam preparation by karnataka minister s suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X