ಲಸ್ಕರ್ (ಗ್ರೂಪ್ ಡಿ) ಹುದ್ದೆಗಳ ನೇಮಕಾತಿ- ತಾತ್ಕಾಲಿಕ ಮೆರಿಟ್ ಪಟ್ಟಿ

Posted By:

ಎನ್ ಸಿ ಸಿ ನಿರ್ದೇಶನಾಲಯ (ರಾಜ್ಯಕೋಶ) ಬೆಂಗಳೂರು ಮತ್ತು ರಾಜ್ಯದ ವ್ಯಾಪ್ತಿಯಲ್ಲಿ ಖಾಲಿ ಇರುವ ಲಸ್ಕರ್ (ಗ್ರೂಪ್ ಡಿ) ಹುದ್ದೆಗಳ ನೇರ ನೇಮಕಾತಿ ಸಂಬಂಧ ಈಗಾಗಲೆ ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಶುಲ್ಕವನ್ನು ಪಾವತಿಸಿರುವ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ದಿನಾಂಕ 24-03-2017 ರಂದು ಪ್ರಾಧಿಕಾರದ ವೆಬ್ಟೈಟ್ kea.kar.nic.in ನಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆಗೆ ಅವಕಾಶ

ಪ್ರಕಟಿಸಿದ ಮೆರಿಟ್ ಪಟ್ಟಿಗೆ ಆಕ್ಷೇಪಣೆಗಳೇನಾದರು ಇದ್ದಲ್ಲಿ ದಿನಾಂಕ 31 -03 -2017 ರೊಳಗಾಗಿ ಪ್ರಾಧಿಕಾರಕ್ಕೆ ಇ-ಮೇಲ್ keauthority-ka@nic.in ಮೂಲಕ ಅಥವಾ ಖುದ್ದಾಗಿ ವಿವರಗಳನ್ನು ಕಳುಹಿಸಬಹುದು.

ಹೆಚ್ಚಿನ ವಿವರಗಳನ್ನು ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.

ನೇಮಕಾತಿ- ತಾತ್ಕಾಲಿಕ ಮೆರಿಟ್ ಪಟ್ಟಿ

ನೇಮಕಾತಿ ಅಧಿಸೂಚನೆ

ಖಾಲಿ ಇರುವ ಲಸ್ಕರ್ (ಗ್ರೂಪ್ 'ಡಿ') ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕಳೆದ ಡಿಸೆಂಬರ್ ತಿಂಗಳಿನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ನೇಮಕಾತಿ ಕುರಿತಂತೆ ಎನ್ ಸಿ ಸಿ ನಿರ್ದೇಶನಾಲಯ (ರಾಜ್ಯಕೋಶ) ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಕೋರಿತ್ತು.

Karnataka Directorate of National Cadet Corps (Cadre and Recruitment) Rules 2003 ಅನ್ವಯ ಲಸ್ಕರ್ (ಗ್ರೂಪ್ 'ಡಿ') ಹುದ್ದೆಗಳನ್ನು ನೇರ ನೇಮಕಾತಿ ಮಾಡುವ ಸಂಬಂಧ ಎಸ್.ಎಸ್.ಎಲ್.ಸಿ/10ನೇ ತರಗತಿ / ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಕನ್ನಡ ವಿಷಯವನ್ನು ಒಂದು ಭಾಷೆಯನ್ನಾಗಿ ಅಭ್ಯಸಿಸಿರುವ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಹತಾ ಪರೀಕ್ಷೆಯಲ್ಲಿ ಅಂದರೆ ಎಸ್.ಎಸ್.ಎಲ್.ಸಿ. /10ನೇ ತರಗತಿ / ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಾಗಿತ್ತು.

ಆಯ್ಕೆ ಪ್ರಕ್ರಿಯೆ

ಸದ್ಯ ಬಿಡುಗಡೆಯಾಗಿರುವ ತಾತ್ಕಾಲಿಕ ಪಟ್ಟಿಯಲ್ಲಿ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನುಸಾರ ಹುದ್ದೆಗಳಿಗೆ ಆಯ್ಕೆ ಮಾಡಲಾಗಿದೆ. ಅರ್ಹತಾ ಪರೀಕ್ಷೆಯಲ್ಲಿ ಇಬ್ಬರು ಅಥವಾ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳನ್ನು ಪಡೆದಿದ್ದರೆ, ಅಂಕಗಳ ಅರ್ಹತಾ ಪಟ್ಟಿ ತಯಾರಿಸುವಾಗ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ವಯಸ್ಸಿನ ಆಧಾರದ ಮೇಲೆ ನಿಗದಿಪಡಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ವಯಸ್ಸಿನಲ್ಲಿ ಹಿರಿಯರಾದವರನ್ನು ಅರ್ಹತಾ ಪಟ್ಟಿಯಲ್ಲಿ ಹಿರಿಯರೆಂದು ತೋರಿಸಲಾಗಿದ್ದು ಆಯ್ಕೆಯಾದವರ ಪಟ್ಟಿ ವೆಬ್ಸೈಟ್ ನಲ್ಲಿ ಲಭ್ಯವಿದೆ.

ವೇತನ ಶ್ರೇಣಿ : 9,600-14,550
ಒಟ್ಟು ಹುದ್ದೆಗಳು : 82 - ಪ್ರವರ್ಗವಾರು ವಿವರಗಳನ್ನು ಪ್ರಾಧಿಕಾರದ ವೆಬ್‍ಸೈಟ್ kea.kar.nic.in ನಲ್ಲಿ ನೀಡಲಾಗಿದೆ

English summary
The provisional merit list of candidates who have already submitted theapplication online and paid the fees direct recruitment of r-ASCAR (Group-D)posts to NCC Department, is hosted on the KEA website

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia