ಬೆಂಗಳೂರು ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಪ್ರವೇಶ ಪ್ರಕಟಣೆ

Posted By:

ದೇಶದ ಹಲವು ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಿಗೆ ನೆಲೆವೀಡಾಗಿರುವ ಬೆಂಗಳೂರು ಈಗ ಅರ್ಥಶಾಸ್ತ್ರ, ಸಾಮಾಜಿಕ ವಿಜ್ಞಾನ ಹಾಗೂ ಸಾರ್ವಜನಿಕ ಆಡಳಿತದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗೆ ತಾಣವಾಗುತ್ತಿದೆ.

ದೇಶದ ಶ್ರೇಷ್ಠ ಅರ್ಥಶಾಸ್ತ್ರತಜ್ಞ ಹಾಗೂ ರಾಷ್ಟ್ರ ನಾಯಕ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಬೇಸ್ ಎಂಬ ಸ್ವಾಯತ್ತ ಸಂಸ್ಥೆಯನ್ನು ಸ್ಥಾಪಿಸಿದೆ.

ಸಂಸ್ಥೆಯ ವೈಶಿಷ್ಟ್ಯ ಮತ್ತು ಸೌಲಭ್ಯಗಳು

ಬೇಸ್ ಅನ್ನು ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಾಗಿ ರೂಪಿಸಲು ಹಾಗೂ ವಿಶ್ವದರ್ಜೆಯ ಸಂಸ್ಥೆಗಳ ಬೋಧನಾ ಗುಣಮಟ್ಟವನ್ನು ಖಾತರಿಪಡಿಸುವ ಸಲುವಾಗಿ, ದೇಶ ಹಾಗೂ ವಿದೇಶಗಳ ಉತ್ತಮ ಪ್ರಾಧ್ಯಾಪಕರುಗಳನ್ನು ಆಹ್ವಾನಿಸಿ ಸಂಸ್ಥೆಯಲ್ಲಿ ಬೋಧಿಸಲು ಉದ್ದೇಶಿಸಿದೆ.

ಬೇಸ್ ಪ್ರವೇಶ ಪ್ರಕಟಣೆ

ಬೇಸ್ ಒಂದು ಸಂಪೂರ್ಣ ವಸತಿ ಶಿಕ್ಷಣ ಸಂಸ್ಥೆಯಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಮತ್ತು ಸಂಶೋಧನಾರ್ಥಿಗಳು ಕಡ್ಡಾಯವಾಗಿ ಕ್ಯಾಂಪಸ್ ನಲ್ಲಿರುವ ವಿದ್ಯಾರ್ಥಿನಿಲಯದಲ್ಲೇ ನೆಲಸಬೇಕಾಗಿದೆ.

ಆರಂಭಿಕವಾಗಿ 2017-18ರ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎಸ್ಸಿ (ಆನರ್ಸ್) ಅರ್ಥಶಾಸ್ತ್ರ ಕೋರ್ಸ್ ಪ್ರಾರಂಭಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ರಾಜ್ಯ ಮಂಡಳಿಗಳ/ಸಿಬಿಎಸ್ಇ/ಐಸಿಎಸ್ಇಗಳಿಂದ ಗಣಿತ ಒಂದು ವಿಷಯವಾಗಿಸಿಕೊಂಡು 10+2 ಅನ್ನು ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ ಸರಾಸರಿ ಶೇ.65 ಅಂಕ (ಪ.ಜಾ/ಪ.ಪಂ ದವರಿಗೆ ಶೇ.60) ಗಳಿಸಿದವರನ್ನು ಪರಿಗಣಿಸಲಾಗುವುದು.

ಪ್ರಶಂಸನೀಯ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ಕರ್ನಾಟಕ ಸರ್ಕಾರ ನಿರ್ಧರಿಸಿದಂತೆ ಸೀಟುಗಳ ಮೀಸಲಾತಿಯನ್ನು ಅಳವಡಿಸಿಕೊಳ್ಳಲಾಗುವುದು. ಶೆ.50ರಷ್ಟು ಸೀಟುಗಳ ಕರ್ನಾಟಕದ ಸ್ಥಳೀಯರಿಗೆ ಮತ್ತು ಉಳಿದ ಶೇ.50ರಷ್ಟು ದೇಶದ ಇತರೆ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ.

ಪ್ರವೇಶ ಪ್ರಕ್ರಿಯೆ

  • ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಸೀಟು ನೀಡಲಾಗುವುದು.
  • ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ರಾಜ್ಯದಲ್ಲಿನ ನಾಲ್ಕು ಕಂದಾಯ ವಿಭಾಗೀಯ ಕೇಂದ್ರ ಸ್ಥಾನಗಳಾದ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ಹಾಗೂ ಪುಣೆ, ಕೋಲ್ಕತ್ಥಾ, ದೆಹಲಿ ಮತ್ತು ಚೆನ್ನೈ ನಗರಗಳಲ್ಲಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ kea.kar.nic.in ಗಮನಿಸಿ

English summary
Bengaluru Dr BR Ambedkar School of Economics (BASE) on the lines of London School of Economics and this budget will enable in giving students quality education.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia