ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)-ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ನೇಮಕಾತಿಯ ಟೆಕ್ನೀಶಿಯನ್-ಎ ಹುದ್ದೆಗಳ ಟೈಯರ್-II ಪರೀಕ್ಷಾ ದಿನಾಂಕವನ್ನು ಘೋಷಿಸಲಾಗಿದೆ ಹಾಗೂ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಸಂಸ್ಥೆಯು ಒಟ್ಟು 351 ಟೆಕ್ನೀಶಿಯನ್ -ಎ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಜೂನ್ 26,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಟೈಯರ್-I ಮತ್ತು ಟ್ರೇಡ್ ಗೆ ಸಂಬಂಧಪಟ್ಟಂತೆ ಟೈಯರ್-II ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು,ಇದೀಗ ಟೈಯರ್-II ಪರೀಕ್ಷಾ ದಿನಾಂಕವನ್ನು ಘೋಷಿಸಿದೆ ಹಾಗೂ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿರುತ್ತದೆ.
ಡಿಆರ್‌ಡಿಓ ಜನವರಿ 20,2020ರಂದು ಟೈಯರ್-II ಪರೀಕ್ಷೆಯನ್ನು ನಡೆಸುತ್ತಿದ್ದು, ಟೈಯರ್-I ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಟೈಯರ್-II ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1 : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)ಯ ಅಧಿಕೃತ ವೆಬ್‌ಸೈಟ್ https://www.drdo.gov.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಲಭ್ಯವಿರುವ DRDO Recruitment (CEPTAM Notice Board) ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3 : ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Click here to Download Admit Card for TIER-II (TRADE TEST) ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 4 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನೀವು ಅರ್ಜಿ ಸಲ್ಲಿಸಿದ ಹುದ್ದೆಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5 : ಅಭ್ಯರ್ಥಿಗಳು ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 6 : ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











