ಡಿಆರ್‌ಡಿಓ-ಸಿಇಪಿಟಿಎಎಂ ನೇಮಕಾತಿಯ ಟೆಕ್ನೀಶಿಯನ್ -ಎ ಹುದ್ದೆಗಳ ಟೈಯರ್‌-I ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)-ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ನ ಟೆಕ್ನೀಶಿಯನ್-ಎ ಹುದ್ದೆಗಳ ನೇಮಕಾತಿಯ ಟೈಯರ್‌-I ಪರೀಕ್ಷಾ ದಿನಾಂಕವನ್ನು ಘೋಷಿಸಲಾಗಿದೆ ಹಾಗೂ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಡಿಆರ್‌ಡಿಓ-ಸಿಇಪಿಟಿಎಎಂ ನೇಮಕಾತಿಯ ಪರೀಕ್ಷಾ ದಿನಾಂಕ ಘೋಷಣೆ : ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಸಂಸ್ಥೆಯು ಒಟ್ಟು 351 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಜೂನ್ 26,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು,ಇದೀಗ ಪರೀಕ್ಷಾ ದಿನಾಂಕವನ್ನು ಘೋಷಿಸಿದೆ.

ಸೆಪ್ಟೆಂಬರ್ 28-30,2019ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1 : ಅಭ್ಯರ್ಥಿಗಳು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)ಯ ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/labs1/CEPTAM/English/indexnew.jsp?pg=homepage.jsp ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಲಭ್ಯವಿರುವ CAREERS ಮೇಲೆ ಕ್ಲಿಕ್ ಮಾಡಿ ಅಲ್ಲಿ ಸಿಗುವ ಆಯ್ಕೆಗಳಲ್ಲಿ Technical Staff ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಇನ್ನೊಂದು ಪುಟಕ್ಕೆ ಹೋಗುವಿರಿ ಇಲ್ಲಿ CEPTAM ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4 : ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "CEPTAM NOTICE BOARD (CEPTAM -09 RECRUITMENT)" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5 : ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Downlaod Admit Card (Tier -I)" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6 : ಅಭ್ಯರ್ಥಿಯು ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 7 : ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್
ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
DRDO CEPTAM recruitment 2019 announced CBT exam date and released Tier-I admit card for technician A posts. Candidates can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+