
ಬೋರ್ಡ್ ಆಫ್ ಟೆಕ್ನಿಕಲ್ ಎಕ್ಸಾಮಿನೇಶನ್, ಬಿಟಿಇ ಲಿಂಕ್ಸ್ ಕರ್ನಾಟಕ ಡಿಪ್ಲೋಮಾ 2021ರ ಫಲಿತಾಂಶ ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಯಾರೆಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರೋ ಅವರೆಲ್ಲಾ ಫಲಿತಾಂಶ ಪ್ರಕಟವಾದ ಬಳಿಕ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
ಇಲಾಖೆಯು ಡಿಪ್ಲೋಮಾ ಪರೀಕ್ಷೆಗಳನ್ನು ಆಗಸ್ಟ್ ತಿಂಗಳಿನಲ್ಲಿ ನಡೆಸಿತ್ತು. ಇದೀಗ ಸೆಪ್ಟೆಂಬರ್ ನಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಿದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಹೇಗೆ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಇಲ್ಲಿ ತಿಳಿಸಲಾಗಿದೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ:
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://dte.kar.nic.in/index.shtml ಅಥವಾ https://btelinx.in/ ಗೆ ಲಾಗಿನ್ ಆಗಿ
ಸ್ಟೆಪ್ 2: ಕರ್ನಾಟಕ ಡಿಪ್ಲೋಮಾ 2021ರ ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ಪರೀಕ್ಷಾ ಪ್ರವೇಶ ಪತ್ರದ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಫಲಿತಾಂಶವನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ


Click it and Unblock the Notifications











