ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮಾಹಿತಿ ಅಪ್ಲೋಡ್ ಮಾಡಲು ಶಿಕ್ಷಣ ಇಲಾಖೆ ಆದೇಶ

Posted By:

ರಾಜ್ಯದ ಎಲ್ಲ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗು ಅನುದಾನರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ 2018 ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಯಲಿರುವ ಪರೀಕ್ಷೆಗೆ ಹಾಜರಗುವ ಶಾಲಾ ವಿದ್ಯಾರ್ಥಿಗಳ ಮತ್ತು ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ನೋಂದಾಯಿಸಿದ ಅಭ್ಯರ್ಥಿಗಳ ವಿವರಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡುವಂತೆ ಸೂಚಿಸಲಾಗಿದೆ.

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ ನಲ್ಲಿ ನೋಂದಣಿ ಮಾಡಲು ಶಾಲಾ ಮುಖ್ಯ ಶಿಕ್ಷಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರವನ್ನು ತೆರೆದಿದೆ.

ವಿದ್ಯಾರ್ಥಿಗಳ ಮಾಹಿತಿ ಅಪ್ಲೋಡ್ ಗೆ ಆದೇಶ

ಪರೀಕ್ಷಾ ಮಂಡಳಿಯ ವಿವಿಧ ಚಟುವಟಿಕೆಗಳನ್ನು ಗಣಕೀಕರಣಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತವಾಗಿ ವಿದ್ಯಾರ್ಥಿಗಳ ನೋಂದಣಿ ಕಾರ್ಯವನ್ನು ಪ್ರತಿ ವರ್ಷದಂತೆ ಓಎಂಆರ್ ಬಳಸಿ ಮಾಡುವ ಬದಲು ಎಸ್ಎಟಿಎಸ್ ಆಧಾರಿತ ಮಕ್ಕಳ ಮಾಹಿತಿಯೊಂದಿಗೆ ಹೆಚ್ಚುವರಿ ಮಾಹಿತಿ ಸಂಗ್ರಹಿಸಿ ತಯಾರಿಸಲು ನಿರ್ಧರಿಸಲಾಗಿದೆ.

ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿನೀಡಿ ಮಾಹಿತಿಗಳನ್ನೂ ಅಪ್ಲೋಡ್ ಮಾಡಬೇಕಾಗುತ್ತದೆ.

ಮುಖ್ಯಶಿಕ್ಷಕರಿಗೆ ಎಸ್ಎಟಿಎಸ್ ವತಿಯಿಂದ ಈಗಾಗಲೇ ನೀಡಿರುವ username and password ಬಳಸಿ ಆನ್ಲೈನ್ ನೋಂದಣಿ ಕಾರ್ಯ ಮಾಡಬಹುದಾಗಿದೆ.

ಏಪ್ರಿಲ್-2018 ರಲ್ಲಿ ಹೊಸದಾಗಿ ಪರೀಕ್ಷೆ ತೆಗೆದುಕೊಳ್ಳುತ್ತಿರುವ ಶಾಲಾ ವಿದ್ಯಾರ್ಥಿಗಳು ಹಾಗು ಖಾಸಗಿ ಅಭ್ಯರ್ಥಿಗಳಿಗೆ ಮಾತ್ರ ಆನ್ಲೈನ್ ಫಾರ್ಮ್ ಬಳಸುವುದು.

ಪುನರಾವರ್ತಿತ ಶಾಲಾ ಅಭ್ಯರ್ಥಿಗಳ ಹಾಗು ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳ ಮಾಹಿತಿಗಳು ಈಗಾಗಲೇ ಮಂಡಳಿಯನ್ನು ತಲುಪಿ ಗಣಕೀಕರಣಗೊಂಡಿದ್ದು ಈ ಸುತ್ತೋಲೆ ಈ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ.

ದಿನಾಂಕ 10/12/2017 ಮಾಹಿತಿಯನ್ನು ಅಪ್ಲೋಡ್ ಮಾಡಲು ಕಡೆಯ ದಿನವಾಗಿದೆ.

ಸಹಾಯವಾಣಿ: 080-23310075, 080-23310076

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Karnataka Secondary Education Examination Board Circular on online student data entry for SSLC exam.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia