ಶಾಲಾ ವಿದ್ಯಾರ್ಥಿಗಳ ಸಾಮರ್ಥ್ಯ ಅಳೆಯಲು ವಿಶೇಷ ಪರೀಕ್ಷೆ

Posted By:

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುವ ಮಕ್ಕಳ ಕಲಿಕಾ ಮಟ್ಟವನ್ನು ಅಳೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.

4 ರಿಂದ 9ನೇ ತರಗತಿಗಳ ಎಲ್ಲಾ ವಿದ್ಯಾರ್ಥಿಗಳ ಅರ್ಹತೆ ಮತ್ತು ಸಾಧನಾ ಮಟ್ಟವನ್ನು ಪರಿಶೀಲಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಆಂಗೀಕರಣ ಪರಿಷತ್ತು ಸಹಯೋಗದೊಂದಿಗೆ ಅಕ್ಟೋಬರ್‌ನಲ್ಲಿ ಪರೀಕ್ಷೆ ನಡೆಸಲಿದೆ.

ಸಾಮರ್ಥ್ಯ ಅಳೆಯಲು ವಿಶೇಷ ಪರೀಕ್ಷೆ

2017-18ನೇ ಸಾಲಿನ ಅಕ್ಟೋಬರ್‌ನಲ್ಲಿ 4 ರಿಂದ 9ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಎರಡು ದಿನ ಈ ಪರೀಕ್ಷೆ ನಡೆಸಿ ಸಮೀಕ್ಷೆ ನಡೆಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ದಿನ ನಡೆಯುವ ಪರೀಕ್ಷೆ

4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವಿಷಯಗಳು ಹಾಗೂ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಆರು ವಿಷಯಗಳಿಗೆ ರಾಜ್ಯ ಕಲಿಕಾ ಸಾಧನಾ ಮಟ್ಟದ ಸಮೀಕ್ಷೆ ನಡೆಸಲಾಗುವುದು.

ಮೊದಲ ದಿನ 4 ಮತ್ತು 5ನೇ ತರಗತಿಗೆ ಪ್ರಥಮ ಹಾಗೂ ದ್ವಿತೀಯ ಭಾಷೆಗಳ ಪ್ರಶ್ನೆಗಳನ್ನೊಳಗೊಂಡ ಒಂದು ಪ್ರಶ್ನೆ ಪತ್ರಿಕೆಯ ಬುಕ್‌ಲೆಟ್‌ ನೀಡಿದರೆ 6 ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪ್ರಶ್ನೆಗಳನ್ನೊಳಗೊಂಡ ಒಂದು ಪ್ರಶ್ನೆ ಪತ್ರಿಕೆಯ ಬುಕ್‌ಲೆಟ್‌ ನೀಡಲಾಗುವುದು.

ಎರಡನೇ ದಿನ 4 ಹಾಗೂ 5ನೇ ತರಗತಿಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಯ ಬುಕ್‌ಲೆಟ್‌ ಗಣಿತ ಹಾಗೂ ಪರಿಸರ ಅಧ್ಯಯನ ವಿಷಯಗಳನ್ನೊಳಗೊಂಡರೆ, 6 ರಿಂದ 9ನೇ ತರಗತಿಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಯ ಬುಕ್‌ಲೆಟ್‌ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳನ್ನೊಳಗೊಂಡಿರುತ್ತದೆ.

ಪರೀಕ್ಷೆಗಳ ನಂತರ ಆಯಾ ಶಾಲೆಗಳಲ್ಲೇ ಮೌಲ್ಯಮಾಪನ ನಡೆಸಿ ವಿದ್ಯಾರ್ಥಿಗಳ ಗ್ರಹಿಕೆ, ಸಾಮರ್ಥ್ಯ ಮತ್ತು ಅರ್ಹತೆಯನ್ನು ಅಳೆದು ಮಾಹಿತಿ ಪಡೆಯಲಾಗುವುದು.

English summary
Department of public instructions has to conduct eligibility test for 4th to 9th standard students who are studying in government and aided schools.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia