Vidyagama: ರಾಜ್ಯದಲ್ಲಿ ತಾತ್ಕಾಲಿಕವಾಗಿ ವಿದ್ಯಾಗಮ ಯೋಜನೆ ಸ್ಥಗಿತ

ರಾಜ್ಯದಲ್ಲಿ ಕೊರೋನ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತ

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ಹು ತರಲಾಗಿತ್ತು. ಆದರೆ ಇದೀಗ ವಿದ್ಯಾಗಮ ಯೋಜನೆಯಿಂದ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ ಇದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Vidyagama project has been temporarily stopped said education minsiter s suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X