ರಾಜ್ಯ ನೌಕರರ ವಿಮಾ ನಿಗಮ ನವದೆಹಲಿ ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಫೆಬ್ರವರಿ 26 ಮತ್ತು 27,2019 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದ್ದು ಇದೀಗ ಸರಿ ಉತ್ತರಗಳನ್ನು (ಕೀ ಉತ್ತರ) ಪ್ರಕಟ ಮಾಡಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ https://www.esic.nic.in/ ವಿಳಾಸಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ವಿಷಯವಾರು ಪ್ರಶ್ನೆಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ತಾತ್ಕಾಲಿಕ ಸರಿ ಉತ್ತರಗಳನ್ನು ಮಾಸ್ಟರ್ ಪ್ರಶ್ನೆ ಪತ್ರಿಕೆಯೊಂದಿಗೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ತಮ್ಮ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಗೆ ಅನುಗುಣವಾಗಿ ಪರಿಶೀಲಿಸಲು ಸೂಚಿಸಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 8,2019ರ ಮಧ್ಯರಾತ್ರಿಯೊಳಗೆ ನಿಮ್ಮಆಕ್ಷೇಪಣೆ ಅನ್ನು ನೀಡಲಾಗಿರುವ ಲಿಂಕ್ ಮೂಲಕ ಸಲ್ಲಿಸಬಹುದು. ಈ ಬಗೆಗಿನ ಅಧಿಸೂಚನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
ಕೀ ಉತ್ತರಗಳನ್ನು ಪಡೆಯುವ ವಿಧಾನ:
* ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ವೆಬ್ಸೂಟ್ https://www.esic.nic.in/ ಗೆ ಭೇಟಿ ನೀಡಿ
* ನಂತರ Recruitment ಗೆ ಹೋಗಿ ಅಲ್ಲಿ ಕಾಣಿಸುವ "Click Here to View Questions with their Answersand Submit Objections (if any)for recruitment to paramedical & Nursing Cadre Posts 2018, Date of exam -26th & 27th February ,2019" ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಯೂಸರ್ ಐಡಿ ಮತ್ತು ನಿಮ್ಮ ಪಾಸ್ವರ್ಡ್ ನೀಡಿ ಕೀ ಉತ್ತರವನ್ನು ವೀಕ್ಷಿಸಿ
ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಕ್ಷೇಪಣೆಗಳನ್ನು ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಮಾರ್ಚ್ 8,2019ರ ಮಧ್ಯರಾತ್ರಿಯೊಳಗೆ ಕಳುಹಿಸಬಹುದಾಗಿದೆ.
ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೀ ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ