ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಎಂಟಿಎಸ್ ಹುದ್ದೆಗಳ ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಫೇಸ್ I ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಫೇಸ್ II ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿಯ ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಔಟ್

ರಾಜ್ಯ ನೌಕರರ ವಿಮಾ ನಿಗಮವು ಒಟ್ಟು 3865 ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಜನವರಿ 15, 2022 ರಿಂದ ಫೆಬ್ರವರಿ 15, 2022ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಶನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಫೆಬ್ರವರಿ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿಯ ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಔಟ್

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಇದೀಗ ಫೇಸ್ I ಫಲಿತಾಂಶ ಮತ್ತು ಫೇಸ್ IIರ ಪರೀಕ್ಷೆಯನ್ನು ಜೂನ್ 5,2022ರಂದು ನಿಗದಿಪಡಿಸಲಾಗಿದ್ದು, ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು ಮತ್ತು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC MTS phase I result and phase II admit card 2022 released, Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+