ರಾಜ್ಯ ನೌಕರರ ವಿಮಾ ನಿಗಮವು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ಒಟ್ಟು 3865 ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 15,2022 ರಿಂದ ಫೆಬ್ರವರಿ 15, 2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಶನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಫೆಬ್ರವರಿ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಯುಡಿಸಿ ಹುದ್ದೆಗಳಿಗೆ ಮಾರ್ಚ್ 19,2022ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಮಾರ್ಚ್ 20,2022ರಂದು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ನಿಗದಿಪಡಿಸಲಾಗಿತ್ತು. ಇದೀಗ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದ್ದು, ಮುಖ್ಯ ಪರೀಕ್ಷೆಗೆ ಒಟ್ಟು 20,681 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಫೇಸ್ II ಪರೀಕ್ಷೆಯನ್ನು ಏಪ್ರಿಲ್ 30,2022ರಂದು ನಡೆಸಲಾಗುತ್ತದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಇಎಸ್ಐಸಿ ಫೇಸ್ I ಪರಿಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಹೊಸ ಪುಟ ತೆರೆಯುತ್ತದೆ ಅಲ್ಲಿ ಪಿಡಿಎಫ್ ಲಭ್ಯವಿರುತ್ತದೆ
ಸ್ಟೆಪ್ 4 : ಅಭ್ಯರ್ಥಿಗಳು ಪಿಡಿಎಫ್ ಅನ್ನು ವೀಕ್ಷಿಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ
ಸ್ಟೆಪ್ 5 : ಅಭ್ಯರ್ಥಿಗಳು ಮುಂದಿನ ರೆಫರೆನ್ಸ್ ಗಾಗಿ ಫಲಿತಾಂಶದ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.