ಕಾರ್ಮಿಕರ ರಾಜ್ಯ ವಿಮಾ ನಿಗಮವು ಶೀಘ್ರಲಿಪಿಗಾರ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಯ ಕಂಪ್ಯೂಟರ್ ಕೌಶಲ್ಯ ಪರೀಕ್ಷಾ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗಿದೆ.

ಇಎಸ್‌ಐಸಿ ಭಾರತದೆಲ್ಲೆಡೆ ಒಟ್ಟು 1934 ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 15.2019ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಕರ್ನಾಟಕದಲ್ಲಿ ಒಟ್ಟು 159 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಕೌಶಲ್ಯ ಪರೀಕ್ಷೆ ನಡೆಸುತ್ತಿದೆ.
ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಕಂಪ್ಯೂಟರ್ ಕೌಶಲ್ಯ ಪರೀಕ್ಷೆ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಶೀಘ್ರಲಿಪಿ ಪರೀಕ್ಷೆ ಮತ್ತು ಕಂಪ್ಯೂಟರ್ ಕೌಶಲ್ಯ ಪರೀಕ್ಷೆಯನ್ನು ಅಕ್ಟೋಬರ್ 20,2019ರಂದು ನಡೆಸಲಾಗುತ್ತಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಅಭ್ಯರ್ಥಿಗಳು ಕಂಪ್ಯೂಟರ್ ಕೌಶಲ್ಯ ಪರೀಕ್ಷೆಯ ದಿನಾಂಕದ ಪ್ರಕಟಣೆಯನ್ನು ಓದಲು ಮುಂದೆ ನೋಡಿ


Click it and Unblock the Notifications