ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಆರಂಭಗೊಂಡಿದ್ದು, ಫಲಿತಾಂಶವನ್ನು ಜುಲೈ 8 ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದ್ದು, ಅದಕ್ಕೂ ಈಗಾಗಲೆ ವೇಳಾಪಟ್ಟಿ ನಿಗದಿಯಾಗಿರುತ್ತದೆ. ಹಾಗೂ ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.
SSLC ಪರೀಕ್ಷೆಗಳಿಗೆ ವೇಳಾಪಟ್ಟಿ ಈಗಾಗಲೆ ಬಿಡುಗಡೆ ಮಾಡಲಾಗಿದ್ದು, ಜುಲೈ 04 ಕ್ಕೆ ಪರೀಕ್ಷೆ ಮುಗಿಯಲಿದೆ. ಜುಲೈ ಅಂತ್ಯದಲ್ಲಿ ಎಸ್‌ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ ಮತ್ತು ಇದಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದ್ದಾರೆ.
ಈ ಭಾರಿ 8.48 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದು, ಕೊರೋನಾ ಸಮಸ್ಯೆ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಪ್ರತಿ ವರ್ಷ 24 ವಿದ್ಯಾರ್ಥಿಗಳನ್ನು ಒಂದು ಕೊಠಡಿಯಲ್ಲಿ ಕೂರಿಸಲಾಗುತ್ತಿತ್ತು. ಆದರೆ ಈ ವರ್ಷ ಸುರಕ್ಷತಾ ಹಿನ್ನೆಲೆಯಲ್ಲಿ 18 ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತದೆ. ಆರೋಗ್ಯದಲ್ಲಿ ಏರುಪೇರುಗಳಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ಬರೆಯಲು ಆಗದ ವಿದ್ಯಾರ್ಥಿಗಳಿಗೆ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆ ನಡೆಸಲಾಗುವುದು ಅಲ್ಲಿ ಅಂತಹ ವಿದ್ಯಾರ್ಥಿಗಳನ್ನು ಫ್ರೆಶ್ ಕ್ಯಾಂಡಿಡೇಟ್ ಎಂದು ಪರಿಗಣಿಸಲಾಗುವುದು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಸಮೀಪದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ 130, ಮಂಡ್ಯದಲ್ಲಿ 83, ಕೊಡಗಿನಲ್ಲಿ 27 ಒಟ್ಟಾರೆ ಮೂರು ಜಿಲ್ಲೆಗಳಿಂದ 248 ಪರೀಕ್ಷಾ ಕೇಂದ್ರಗಳಿವೆ. ಇದಾವುದೂ ಕಂಟೋನ್ಮೆಂಟ್ ವಲಯದಲ್ಲಿ ಇಲ್ಲ. ಈ ಕಾರಣಕ್ಕಾಗಿ ಪರೀಕ್ಷೆ ಯಶಸ್ವಿಯಾಗುವ ವಿಶ್ವಾಸವಿದೆ. ಪರೀಕ್ಷೆ ನಡೆಸಲೇಬಾರದು ಎಂಬ ಅಭಿಪ್ರಾಯವಿದೆ. ಈ ಸಂಬಂಧ ಹೈಕೋರ್ಟ್‌ನಲ್ಲೂ ಪಿಎಎಲ್ ದಾಖಲಾಗಿತ್ತು. 10ನೇ ತರಗತಿ ಜೀವನದ ಪ್ರಮುಖ ಘಟ್ಟ. ಆದ್ದರಿಂದ ಪರೀಕ್ಷೆ ನಡೆಸಲೇಬೇಕಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.


Click it and Unblock the Notifications











