ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಫ್‌ಎಸಿಟಿ ಒಟ್ಟು 274 ಮ್ಯಾನೇಜರ್, ಅಧಿಕಾರಿ, ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮೇ 20.2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಪರೀಕ್ಷೆಗಳು ಇದೇ ಜುಲೈ 7 ಮತ್ತು 8 ರಂದು ನಡೆಯಲಿದೆ. ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಕೊಳ್ಳಬಹುದು ಮತ್ತು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.
ಎಫ್‌ಎಸಿಟಿ ವಿವಿಧ ಹುದ್ದೆಗಳ ಸಿಬಿಟಿ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಎಫ್‌ಎಸಿಟಿಯ ಅಧಿಕೃತ ವೆಬ್‌ಸೈಟ್ http://www.fact.co.in/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ "Careers" ನಲ್ಲಿ "Job openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "Advt 7/2019-CBT scheduled on 7th and 8th july,2019, candidates may download hall ticket" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು "Download Admit Card" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 7: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತರತಕ್ಕದ್ದು.ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.ಅಭ್ಯರ್ಥಿಗಳು ನಿಮ್ಮ ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











