ಭಾರತೀಯ ಆಹಾರ ನಿಗಮ ನೇಮಕಾತಿ : ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ಫೇಸ್ IIರ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಫ್‌ಸಿಐ 2019 ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಫೇಸ್ II ರ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಭಾರತೀಯ ಆಹಾರ ನಿಗಮ 4103 ಜ್ಯೂನಿಯರ್ ಇಂಜಿನಿಯರ್ (JE) (ಸಿವಿಲ್ ಇಂಜಿನಿಯರಿಂಗ್/ಇಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್), ಮತ್ತು ಅಸಿಸ್ಟೆಂಟ್ ಗ್ರೇಡ್ -|| (ಎಜಿ||) (ಹಿಂದಿ), ಸ್ಟೆನೋ ಗ್ರೇಡ್-||, ಟೈಪಿಸ್ಟ್ (ಹಿಂದಿ) ಮತ್ತು ಅಸಿಸ್ಟೆಂಟ್ ಗ್ರೇಡ್ -||| (ಎಜಿ |||) (ಜನರಲ್ / ಅಕೌಂಟ್ಸ್ /ಟೆಕ್ನಿಕಲ್ /ಡಿಪೋಟ್ ) ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 25,2019 ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು

ಎಫ್‌ಸಿಐ: ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್  ಹುದ್ದೆಗಳ  ಫೇಸ್ II ರ  ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು,ಇದೇ ಜುಲೈ 27,2019 ರಂದು ಪರೀಕ್ಷೆಗಳು ನಡೆಯಲಿವೆ. ಪ್ರವೇಶ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್‌ನಿಂದ ತಮ್ಮ ಪ್ರವೇಶ ಪತ್ರವನ್ನು ಜುಲೈ 27,2019 ರೊಳಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಭಾರತೀಯ ಆಹಾರ ನಿಗಮ ಜೆಇ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್ ಸೈಟ್ http://fci.gov.in/ ಗೆ ಭೇಟಿ ಕೊಡಿ

ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Current Recruitment" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಪುಟದ ಕೆಳಭಾಗದಲ್ಲಿ ಇರುವ "To Download Call Letter For Phase -II Exam,Click On Zone Given Below" ನ ಕೆಳಗಿರುವ ನಿಮ್ಮ Zone ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನಂತರ "To Download Call Letter For Phase-II Exam" ನ ಮುಂದಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂ / ರೋಲ್ ನಂಬರ್ ಮತ್ತು ಹುಟ್ಟಿದ ದಿನಾಂಕ / ಪಾಸ್‌ ವರ್ಡ್‌ ನೀಡಿ ಲಾಗಿನ್ ಆಗಿ. ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ

 

ಸ್ಟೆಪ್ 6: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಕಾಣುವ ಪ್ರವೇಶ ಪತ್ರವನ್ನು ಡೌನಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Food Corporation of India has released the Phase II admit card 2019 for junior engineer and assistant grade posts on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more