Free Bus Travel For SSLC Students : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಬೋರ್ಡ್ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 11,2022 ರವರೆಗೆ ನಡೆಯಲಿದೆ. ರಾಜ್ಯಾದಂತರ ಈ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಕರ್ನಾಟಕ ಸರ್ಕಾರವು ಘೋಷಿಸಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುತ್ತಿದೆ. ರಾಜ್ಯದ ಹಲವೆಡೆ ದೂರದ ಹಳ್ಳಿಗಳ ಮಕ್ಕಳು ಓದಲು ಮತ್ತು ಪರೀಕ್ಷೆ ಬರೆಯಲು ಪಟ್ಟಣಕ್ಕೆ ಬರುತ್ತಾರೆ. ಇದಕ್ಕಾಗಿ ಅವರು ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಹೋಗಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಅವರಿಗೆ ಕಷ್ಟವಾಗುತ್ತದೆ. ಈ ಹಿನ್ನೆಲಯೆಲ್ಲಿ ಸಾರಿಗೆ ಇಲಾಖೆಯ ಈ ಆದೇಶದಿಂದ ಹಲವು ವಿದ್ಯಾರ್ಥಿಗಳು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ರಾಜ್ಯ ಸಾರಿಗೆ ಇಲಾಖೆಯು ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ನಿರ್ದೇಶನ ನೀಡಿದೆ. ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಪ್ರವೇಶ ಪತ್ರ ಕಡ್ಡಾಯಗೊಳಿಸಲಾಗಿದೆ.

ಉಚಿತ ಪ್ರಯಾಣವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಅನ್ನು ತೋರಿಸಬೇಕಾಗುತ್ತದೆ, ಇದನ್ನು ಬಸ್ ಕಂಡಕ್ಟರ್ ಬಳಿ ಬಸ್ ಪಾಸ್ ಜೊತೆಗೆ ಪರಿಶೀಲಿಸಲಾಗುತ್ತದೆ. ಈ ಪ್ರಯೋಜನವನ್ನು ಯಾರೂ ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳುತ್ತಾರೆ. ನಿರ್ದೇಶನದ ಪ್ರಕಾರ, ವಿದ್ಯಾರ್ಥಿಗಳ ಅವಶ್ಯಕತೆಗಳಿಗೆ ಅನುಗುಣವಾಗಿ ಬಸ್ ಅನ್ನು ನಿಲ್ಲಿಸಲು ಬಸ್ ಸಿಬ್ಬಂದಿಗೆ ತಿಳಿಸಲಾಗಿದೆ, ಇದರಿಂದ ಅವರು ಹೆಚ್ಚು ನಡೆಯದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರವನ್ನು ತಲುಪಬಹುದು.

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ಉತ್ತಮ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಶಿಕ್ಷಣ ಸಚಿವರು ಸಾರಿಗೆ ಇಲಾಖೆಗೆ ಪತ್ರ ಬರೆದಿದ್ದರು. ಈ ಬಾರಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಸಾವಿರಾರು ವಿದ್ಯಾರ್ಥಿಗಳು ದೂರದಿಂದ ಬಂದು ಪರೀಕ್ಷೆ ಬರೆಯಲು ಅನುಕೂಲವಾಗಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಏಪ್ರಿಲ್ 11ರ ನಡುವೆ ನಿಗದಿಪಡಿಸಲಾಗಿದೆ. ಪರೀಕ್ಷಾ ಸಮಯವು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಇರುತ್ತದೆ. ಪ್ರತಿ ವಿಷಯಕ್ಕೆ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನೀಡಲಾಗಿದ್ದು, ಪರೀಕ್ಷೆ ಬರೆಯಲು ಉಳಿದ ಸಮಯವನ್ನು ನೀಡಲಾಗಿರುತ್ತದೆ. ಈ ವರ್ಷ ಕೊರೊನಾ ಕಾರಣ ಹೇಳಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ದೈಹಿಕವಾಗಿ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam starts from march 28 to april 11. Free bus services for students who are attending the exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X