ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

Posted By:

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದು, ಮಹಿಳಾ ಶಿಕ್ಷಣವನ್ನು ಉತ್ತೇಜಿಸುವ ಪ್ರಯತ್ನ ಇದಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಹೆಣ್ಣುಮಕ್ಕಳಿಗೆ ಒಂದನೇ ತರಗತಿಯಿಂದ ಪದವಿವರೆಗೂ ಉಚಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕರ್ನಾಟಕಕ್ಕೂ ಬಂತು ಉಚಿತ ಶಿಕ್ಷಣ ಭಾಗ್ಯ

ಸುಮಾರು ₹ 110 ಕೋಟಿ ಅಂದಾಜು ವೆಚ್ಚದೊಂದಿಗೆ ಈ ಯೋಜನೆ ಜಾರಿಗೊಳಿಸುತ್ತಿದ್ದು, ಪೋಷಕರ ವಾರ್ಷಿಕ ಆದಾಯ ₹ 10 ಲಕ್ಷಕ್ಕಿಂತ ಕಡಿಮೆ ಇರುವ ಸುಮಾರು 18 ಲಕ್ಷ ಹೆಣ್ಣುಮಕ್ಕಳಿಗೆ ಇದರಿಂದ ಪ್ರಯೋಜನವಾಗಲಿದೆ. ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಪಂಜಾಬ್, ಮಧ್ಯಪ್ರದೇಶ ಮತ್ತು ತೆಲಂಗಾಣ ನಂತರ ಈಗ ಕರ್ನಾಟಕದಲ್ಲಿ ಉಚಿತ ಶಿಕ್ಷಣ ಅಲೆ ಎದ್ದಿದೆ. ತೆಲಂಗಾಣ ಮತ್ತು ಪಂಜಾಬ್‌ ರಾಜ್ಯಗಳಲ್ಲಿ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ತೆಲಂಗಾಣದಲ್ಲಿ ಸ್ನಾತಕೋತ್ತರ ಪದವಿವರೆಗೂ ಉಚಿತ ಶಿಕ್ಷಣ ನೀಡುತ್ತಿದ್ದರೆ, ಪಂಜಾಬ್‌ನಲ್ಲಿ ಪಿಎಚ್‌.ಡಿ ಅಧ್ಯಯನದವರೆಗೂ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ಇನ್ನು ಮಧ್ಯ ಪ್ರದೇಶದಲ್ಲಿ ಹನ್ನೆರಡನೇ ತರಗತಿ ನಂತರದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ.

'ತೆಲಂಗಾಣ ಮತ್ತು ಪಂಜಾಬ್‌ನಲ್ಲಿರುವ ಯೋಜನೆಗಳನ್ನು ನಾವು ಅನುಕರಣೆ ಮಾಡುತ್ತಿಲ್ಲ. ಮಹಿಳಾ ಸ್ವಾವಲಂಬನೆಗಾಗಿ ಆ ರಾಜ್ಯಗಳ ಮಾದರಿಯನ್ನು ಅಳವಡಿಸಿಕೊಳ್ಳಲಾಗುವುದು. ಖಾಸಗಿ ಶಾಲೆ, ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರ ಶುಲ್ಕವನ್ನು ಸರ್ಕಾರ ಈ ಯೋಜನೆಯಡಿ ಭರಿಸಲಿದೆ' ಎಂದು ರಾಯರೆಡ್ಡಿ ಹೇಳಿದ್ದಾರೆ.

ಮುಂದಿನ ವರ್ಷದ ಚುನಾವಣೆಗಾಗಿ ರಾಜ್ಯ ಸರ್ಕಾರ ಭಾರೀ ಸಿದ್ಧತೆ ನಡೆಸುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭಾರೀ ಉಡುಗೊರೆ ನೀಡಿದೆ.

English summary
To promote education for the girl child, the Karnataka government has decided to make education free for all girls across the state.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia