ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

Posted By:

ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಕೊಡಲು ನಿರ್ಧರಿಸಿದ್ದ ಸರ್ಕಾರ ಈಗ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ ಟಾಪ್ ನೀಡುಲು ಮುಂದಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಸೆಂಟ್ರಲ್‌ ಕಾಲೇಜಿನಲ್ಲಿ ಬುಧವಾರ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರು ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಕೊಡುವುದಾಗಿ ಹೇಳಿದರು.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್

ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಈ ವರ್ಷ ಲ್ಯಾಪ್‌ಟಾಪ್‌ ಉಚಿತವಾಗಿ ನೀಡಲಿದ್ದು, ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್‌ 15ರೊಳಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಿದ್ದೇವೆ. 2018-19ನೇ ಸಾಲಿನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದರು.

ಇದೇ ವೇಳೆ ಮಾತನಾಡಿದ ಅವರು ಒಂದರಿಂದ ಉನ್ನತ ಶಿಕ್ಷಣದ ಎಲ್ಲಾ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದರು.

''ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಶುಲ್ಕ ರದ್ದು ಮಾಡುವ ಬಗ್ಗೆ ಒಂದು ಸಮಿತಿಯನ್ನು ರಚನೆ ಮಾಡಿದ್ದೇವೆ. ಇದರಿಂದ ಸರಕಾರಕ್ಕೆ ತಗುಲಬಹುದಾದ ಆರ್ಥಿಕ ಹೊರೆ ಬಗ್ಗೆ ಸಮಿತಿ ವರದಿ ನೀಡಿದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದೇವೆ'' ಎಂದು ಹೇಳಿದರು.

''ಬೆಂಗಳೂರು ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನ ಕಟ್ಟಡ ಕಾಮಗಾರಿ 15 ದಿನದೊಳಗೆ ಆರಂಭಿಸಲಿದ್ದೇವೆ. ಈಗಾಗಲೇ 50 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಕರ್ನಾಟಕದ ಶೇ 60 ಹಾಗೂ ಹೊರ ರಾಜ್ಯದ ಶೇ 40ರಷ್ಟು ಅಭ್ಯರ್ಥಿಗಳಿಗೆ ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ. ಕೌಶಲಾಭಿವೃದ್ಧಿ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಕಾರ್ಮಿಕ ಇಲಾಖೆಯಿಂದ ಸ್ವಲ್ಪ ಮಟ್ಟಿನ ತೊಡಕಾಗುತ್ತಿದ್ದು, ಆದಷ್ಟು ಬೇಗ ಅದನ್ನೂ ಪರಿಹರಿಸಲಿದ್ದೇವೆ,'' ಎಂದರು.

ಬೆಂವಿವಿ ಹಂಗಾಮಿ ಕುಲಪತಿ ಡಾ.ಎಚ್‌.ಎನ್‌.ರಮೇಶ್‌, ಕುಲಸಚಿವ ಡಾ.ಬಿ.ಕೆ.ರವಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಎಂ.ಮುನಿರಾಜು, ಸಿಂಡಿಕೇಟ್‌ ಸದಸ್ಯ ವಿಜಯ ಕುಮಾರ್‌ ಸಿಂಹ, ಉನ್ನತ ಶಿಕ್ಷಣ ಪರಿಷತ್‌ನ ಪ್ರೊ.ಎಸ್‌.ಎ. ಕೋರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

English summary
Government of Karnataka planning to give free laptops for post graduation students from next year and also to provide free education to girls.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia