ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತರಬೇತಿ ಕೇಂದ್ರದಲ್ಲಿ ನೀಡಲಾಗುತ್ತಿದ್ದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

2017 -18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತರಬೇತಿ ಕೇಂದ್ರದಲ್ಲಿ ನೀಡಲಾಗುತ್ತಿದ್ದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನಮೂನೆಯನ್ನು ಆಯಾ ಜಿಲ್ಲೆಯ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ದಿನಾಂಕ 16-05-2017 ರೊಳಗಾಗಿ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಲು ತಿಳಿಸಿದೆ.

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ

ವಿದ್ಯಾರ್ಥಿಗಳಿಗೆ ಮಾಹಿತಿ

  • ಪ್ರವರ್ಗ-2ಎ ಗೆ ಸೇರಿದ ಸವಿತಾ ಸಮಾಜದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲಾಗುವುದು.
  • ತರಬೇತಿ ಕೇಂದ್ರ: ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ,ದೇವನಹಳ್ಳಿ ಟೌನ್, ಬೆಂಗಳೂರು ಗ್ರಾಮಾಂತರ ಜಿಲ್ಲೆ.

ನಿಗದಿಪಡಿಸಿರುವ ಅರ್ಹತೆಗಳು

  • ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿರಬೇಕು.
  • ಕನಿಷ್ಠ ವಯೋಮಿತಿ 10 ವರ್ಷ ಹಾಗೂ ಗರಿಷ್ಠ ವಯೋಮಿತಿ 15 ವರ್ಷ.
  • ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ-ರೂ.2 ಲಕ್ಷಗಳು.

ವಿದ್ಯಾರ್ಥಿಗಳಿಗೆ ಒದಗಿಸಲಾಗುವ ಸೌಲಭ್ಯಗಳ ವಿವರ

  • ಉಚಿತ ಊಟ ಮತ್ತು ವಸತಿ ವ್ಯವಸ್ಥೆ/ವಸತಿಯೇತರ ವಿದ್ಯಾರ್ಥಿಗಳಿಗೆ ಅವಕಾಶ.
  • ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ.
  • ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಒದಗಿಸಲಾಗುವಂತೆ, ಸಮವಸ್ತ್ರ, ಪಠ್ಯಪುಸ್ತಕ ಮತ್ತು ಲೇಖನ ಸಾಮಾಗ್ರಿ, ಜಮಖಾನ, ಹೊದಿಕೆ, ಕ್ಷೌರದ ವೆಚ್ಚ ಇತ್ಯಾದಿಗಳನ್ನು ಒದಗಿಸಲಾಗುವುದು.
  • ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣೆ ವೆಚ್ಚ ರೂ.1500/- ಹಾಗೂ ತರಬೇತಿ ಭತ್ಯೆ ರೂ.500/-.

ಅರ್ಜಿ ಸಲ್ಲಿಕೆ ವಿಧಾನ

ಪ್ರವರ್ಗ-2ಎ ಗೆ ಸೇರಿದ ಸವಿತಾ ಸಮಾಜದ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸುವುದು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

  • ಜನನ ಪ್ರಮಾಣ ಪತ್ರ.
  • ಓದುತ್ತಿರುವ ಶಾಲೆ ಮತ್ತು ತರಗತಿಯ ಬಗ್ಗೆ ಮುಖ್ಯೋಪಧ್ಯಾಯರಿಂದ ದೃಢೀಕರಣ ಪತ್ರ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2017

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ backwardclasses.kar.nic.in ಸಂಪರ್ಕಿಸಿ.

ಕಛೇರಿ ವಿಳಾಸ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,
ಆಯುಕ್ತ ಕಛೇರಿ, ನಂ.16-ಡಿ, 3ನೇ ಮಹಡಿ,
ಡಿ.ದೇವರಾಜು ಅರಸು ಭವನ, ಮಿಲರ್ಸ್ ಕೆರೆ ಅಂಗಳ,
ವಸಂತ ನಗರ, ಬೆಂಗಳೂರು.

For Quick Alerts
ALLOW NOTIFICATIONS  
For Daily Alerts

English summary
Department of backward classes welfare invites application from students of backward classes for nadaswara and dolu training.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X