ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ( FSSAI) ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್ & ಇತರೆ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಒಟ್ಟು 275 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಿಂದ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಜೂನ್ 22 ರಿಂದ ಜುಲೈ 26,2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.
ಸಿಟಿಇಟಿ 2019ರ ಜುಲೈ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ( FSSAI) ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಎಫ್‌ಎಸ್‌ಎಸ್‌ಎಐ ಯ ಅಧಿಕೃತ ವೆಬ್ ಸೈಟ್ https://fssai.gov.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಇರುವ "Download Admit Card " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಎಫ್‌ಎಸ್‌ಎಸ್‌ಎಐ ನೇಮಕಾತಿ 275 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ