ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ವಿವಿಧ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ ಉತ್ತರಗಳನ್ನು ಚೆಕ್ ಮಾಡಿಕೊಂಡು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಇನ್ನೂರ ಮೂವತ್ಮೂರು (233) ತಾಂತ್ರಿಕ ಅಧಿಕಾರಿ, ಆಹಾರ ವಿಶ್ಲೇಷಕ, ಕೇಂದ್ರ ಆಹಾರ ಸುರಕ್ಷತಾ ಅಧಿಕಾರಿ (CFSO), ವೈಯಕ್ತಿಕ ಸಹಾಯಕ, ಸಹಾಯಕ ವ್ಯವಸ್ಥಾಪಕ, ಸಹಾಯಕ, ಹಿಂದಿ ಅನುವಾದಕ, ಐಟಿ ಸಹಾಯಕ ಮತ್ತು ಕಿರಿಯ ಸಹಾಯಕ ಗ್ರೇಡ್-I ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ನವದೆಹಲಿಯಲ್ಲಿ ಮತ್ತು ಭಾರತದಲ್ಲಿ ಎಲ್ಲಿಯಾದರೂ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳಿಂದ ಅಕ್ಟೋಬರ್ 13,2021 ರಿಂದ ನವೆಂಬರ್ 12,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಎಫ್ಎಸ್ಎಸ್ಎಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ, 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಎಫ್ಎಸ್ಎಸ್ಎಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕ್ರಮವಾಗಿ 3 ವರ್ಷಗಳವರೆಗೆ (OBC-NCL), 5 ವರ್ಷಗಳು (SC/ST) ಮತ್ತು 10 ವರ್ಷಗಳು (PWBD)ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಎಫ್‌ಎಸ್‌ಎಸ್‌ಎಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ + ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯನ್ನು ಮಾರ್ಚ್ 28 ರಿಂದ ಮಾರ್ಚ್ 31,2022ರ ವರೆಗೆ ಎರಡು ಅವಧಿಗಳಲ್ಲಿ ನಡೆಸಲಾಗಿರುತ್ತದೆ. ಈ ಪರೀಕ್ಷೆಯ ಕೀ ಉತ್ತರಗಳನ್ನು ಇದೀಗ ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸಿ ನಂತರ ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 7,2022ರೊಳಗೆ ಸಲ್ಲಿಸಬಹುದು. ಕೀ ಉತ್ತರ ವೀಕ್ಷಿಸುವುದು ಹೇಗೆ ಮತ್ತು ಆಕ್ಷೇಪಣೆಯನ್ನು ಸಲ್ಲಿಸುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.

ಎಫ್ಎಸ್ಎಸ್ಎಐ ಕೀ ಉತ್ತರ 2022 : ಕೀ ಉತ್ತರ ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ಅಭ್ಯರ್ಥಿಗಳು ಎಫ್‌ಎಸ್‌ಎಸ್‌ಎಐ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ 'Link for Question / Answer Key' under the "Jobs@fssai (Careers)" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಕೀ ಉತ್ತರಗಳು ಮೂಡುವುದು ಅದನ್ನು ಪರಿಶೀಲಿಸಿ
ಸ್ಟೆಪ್ 5: ನಂತರ ಆಕ್ಷೇಪಣೆಯ ಆಯ್ಕೆ ಮೇಲೆ ಕ್ಲಿಕ್ ಮಾಡಿ ಸಲ್ಲಿಸಿ
ಅಭ್ಯರ್ಥಿಗಳು ಕೀ ಉತ್ತರಗಳನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











