ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುತ್ತಿರುವ ಕಂಪ್ಯೂಟರ್ ಆಧಾರಿತ/ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಇನ್ನೂರ ಮೂವತ್ಮೂರು (233) ತಾಂತ್ರಿಕ ಅಧಿಕಾರಿ, ಆಹಾರ ವಿಶ್ಲೇಷಕ, ಕೇಂದ್ರ ಆಹಾರ ಸುರಕ್ಷತಾ ಅಧಿಕಾರಿ (CFSO), ವೈಯಕ್ತಿಕ ಸಹಾಯಕ, ಸಹಾಯಕ ವ್ಯವಸ್ಥಾಪಕ, ಸಹಾಯಕ, ಹಿಂದಿ ಅನುವಾದಕ, ಐಟಿ ಸಹಾಯಕ ಮತ್ತು ಕಿರಿಯ ಸಹಾಯಕ ಗ್ರೇಡ್-I ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅಕ್ಟೋಬರ್ 13,2021 ರಿಂದ ನವೆಂಬರ್ 12,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ, 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎಫ್‌ಎಸ್‌ಎಸ್‌ಎಐ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಎಫ್‌ಎಸ್‌ಎಸ್‌ಎಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕ್ರಮವಾಗಿ 3 ವರ್ಷಗಳವರೆಗೆ (OBC-NCL), 5 ವರ್ಷಗಳು (SC/ST) ಮತ್ತು 10 ವರ್ಷಗಳು (PWBD)ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಎಫ್‌ಎಸ್‌ಎಸ್‌ಎಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಫ್‌ಎಸ್‌ಎಸ್‌ಎಐ ಅಧಿಸೂಚನೆ 2021 ರಲ್ಲಿ ಸೂಚಿಸಿರುವಂತೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ + ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಮಾರ್ಚ್ 28 ರಿಂದ 31,2022ರ ವರೆಗೆ ನಡೆಸಲು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.fssai.gov.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ಯೂಸರ್ ಐಡಿ, ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ನಮೂದಿಸಿ
ಸ್ಟೆಪ್ 4 : ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.