ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನೇಮಕಾತಿಯ ಹಿರಿಯ ವ್ಯವಸ್ಥಾಪಕ ಹುದ್ದೆಗಳ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ವಿವಿಧ 37 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಏಪ್ರಿಲ್ 16,2021 ರಿಂದ ಮೇ 15,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಪದವಿ, ಪಿಜಿ ಪದವಿ, ಬಿ.ಟೆಕ್/ಎಂ.ಟೆಕ್/ಎಂಸಿಎ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಎಫ್ಎಸ್ಎಸ್ಎಐ ನೇಮಕಾತಿಯ ಹಿರಿಯ ವ್ಯವಸ್ಥಪಕ ಹುದ್ದೆಗಳಿಗೆ ಗರಿಷ್ಟ 40 ರಿಂದ 50 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಫ್ಎಸ್ಎಸ್ಎಐ ಅಧಿಸೂಚನೆ 2021 ರಲ್ಲಿ ಸೂಚಿಸಿರುವಂತೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈಗಾಗಲೇ ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಸಂದರ್ಶನ ಪ್ರಕ್ರಿಯೆಯನ್ನು ಮಾರ್ಚ್ 3,2022ರಂದು ನಡೆಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಅಂತಿಮ ಫಲಿತಾಂಶವನ್ನು ಇಂದು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.
ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ https://www.fssai.gov.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ನಂತರ ಪಿಡಿಎಫ್ ತೆರೆಯುತ್ತದೆ ಅಲ್ಲಿ ನಿಮ್ಮ ಫಲಿತಾಂಶ ವೀಕ್ಷಿಸಿ
ಸ್ಟೆಪ್ 4 : ಫಲಿತಾಂಶ ವೀಕ್ಷಿಸಿದ ಬಳಿಕ ಡೌನ್ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಮುಂದೆ ನೋಡಿ.