ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನೇಮಕಾತಿಯ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ದಿನಾಂಕಗಳನ್ನು ವೀಕ್ಷಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಇನ್ನೂರ ಮೂವತ್ಮೂರು (233) ತಾಂತ್ರಿಕ ಅಧಿಕಾರಿ, ಆಹಾರ ವಿಶ್ಲೇಷಕ, ಕೇಂದ್ರ ಆಹಾರ ಸುರಕ್ಷತಾ ಅಧಿಕಾರಿ (CFSO), ವೈಯಕ್ತಿಕ ಸಹಾಯಕ, ಸಹಾಯಕ ವ್ಯವಸ್ಥಾಪಕ, ಸಹಾಯಕ, ಹಿಂದಿ ಅನುವಾದಕ, ಐಟಿ ಸಹಾಯಕ ಮತ್ತು ಕಿರಿಯ ಸಹಾಯಕ ಗ್ರೇಡ್-I ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಕ್ಟೋಬರ್ 13,2021 ರಿಂದ ಪ್ರಾರಂಭವಾಗಿ ನವೆಂಬರ್ 12,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ, 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಈ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. FSSAI ಅಧಿಸೂಚನೆ 2021ರಲ್ಲಿ ನಿರ್ದಿಷ್ಟಪಡಿಸಿದಂತೆ ಕ್ರಮವಾಗಿ 3 ವರ್ಷಗಳವರೆಗೆ (OBC-NCL), 5 ವರ್ಷಗಳು (SC/ST) ಮತ್ತು 10 ವರ್ಷಗಳು (PWBD)ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಎಫ್‌ಎಸ್‌ಎಸ್‌ಎಐ ನೇಮಕಾತಿ 2021 ರ ಮೂಲಕ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಫ್‌ಎಸ್‌ಎಸ್‌ಎಐ ಅಧಿಸೂಚನೆ 2021 ರಲ್ಲಿ ಸೂಚಿಸಿರುವಂತೆ ವೇತನವನ್ನು ನೀಡಲಾಗುತ್ತದೆ.
FSSAI ನೇಮಕಾತಿ 2021ರ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ + ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಗಳನ್ನು ಮಾರ್ಚ್ 28 ರಿಂದ 31,2022ರ ವರೆಗೆ ನಿಗದಿಪಡಿಸಲಾಗಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯನ್ನು ವೀಕ್ಷಿಸಲು ಅಧಿಕೃತ ಪ್ರಕಟಣೆಯನ್ನು ಓದಬಹುದು.
ಅಭ್ಯರ್ಥಿಗಳು ಸಂಪೂರ್ಣ ವೇಳಾಪಟ್ಟಿಯನ್ನು ವೀಕ್ಷಿಸಲು ಮುಂದೆ ನೋಡಿ.