FSSAI Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುತ್ತಿರುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಫ್‌ಎಸ್‌ಎಸ್‌ಎಐ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಔಟ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಇನ್ನೂರ ಮೂವತ್ಮೂರು (233) ತಾಂತ್ರಿಕ ಅಧಿಕಾರಿ, ಆಹಾರ ವಿಶ್ಲೇಷಕ, ಕೇಂದ್ರ ಆಹಾರ ಸುರಕ್ಷತಾ ಅಧಿಕಾರಿ (CFSO), ವೈಯಕ್ತಿಕ ಸಹಾಯಕ, ಸಹಾಯಕ ವ್ಯವಸ್ಥಾಪಕ, ಸಹಾಯಕ, ಹಿಂದಿ ಅನುವಾದಕ, ಐಟಿ ಸಹಾಯಕ ಮತ್ತು ಕಿರಿಯ ಸಹಾಯಕ ಗ್ರೇಡ್-I ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 12,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ + ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದ್ದು, ಪರೀಕ್ಷೆಯನ್ನು ಜನವರಿ 17,2022 ರಿಂದ ಜನವರಿ 20,2022ರ ವರೆಗೆ ನಿಗದಿಪಡಿಸಲಾಗಿದೆ.

FSSAI ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕೃತ ವೆಬ್‌ಸೈಟ್ https://www.fssai.gov.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

FSSAI ನೇಮಕಾತಿ 2021 :

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನೇಮಕಾತಿಯ ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ, 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಎಫ್‌ಎಸ್‌ಎಸ್‌ಎಐ ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. FSSAI ನೇಮಕಾತಿ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕ್ರಮವಾಗಿ 3 ವರ್ಷಗಳವರೆಗೆ (OBC-NCL), 5 ವರ್ಷಗಳು (SC/ST) ಮತ್ತು 10 ವರ್ಷಗಳು (PWBD)ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
FSSAI released written exam/CBT admit card for various posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+