ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) 2020ರ ಗೇಟ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್(ಗೇಟ್) ಪರೀಕ್ಷೆಯನ್ನು ತೆಗೆದುಕೊಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಗೇಟ್ ಪರೀಕ್ಷೆಯನ್ನು ಫೆಬ್ರವರಿ 1, 2, 8 ಮತ್ತು 9,2020 ರಂದು ದೇಶದಾದ್ಯಂತ ನಡೆಸಲಿದೆ. ಈ ಭಾರಿ ಗೇಟ್ ಪರೀಕ್ಷೆಯನ್ನು 8.6 ಲಕ್ಷ ಅಭ್ಯರ್ಥಿಗಳು ಬರೆಯಲಿದ್ದಾರೆ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಐಐಟಿ ದೆಹಲಿಯ ಅಧಿಕೃತ ವೆಬ್‌ಸೈಟ್ http://gate.iitd.ac.in/index.php ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Admit Card is now available for download ಮುಂದಿರುವ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು ಎನ್‌ರೋಲ್ಮೆಂಟ್ ಐಡಿ/ ಇ-ಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರ ಮತ್ತು ಅಧಿಕೃತ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











