ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ, ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್ 2021) ಪರೀಕ್ಷೆಯ ಕೇಂದ್ರ ಬದಲಾವಣೆಗೆ ಅವಕಾಶ ನೀಡಿದೆ. ಪರೀಕ್ಷೆಯನ್ನು ತೆಗೆದುಕೊಂಡಿರುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಯನ್ನು ಮಾಡಿಕೊಳ್ಳಬಹುದು.
ಐಐಟಿ ಬಾಂಬೆಯು ವಿದ್ಯಾರ್ಥಿಗಳ ಬೇಡಿಕೆ ಮೇರೆಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಆನ್‌ಲೈನ್ ಪೋರ್ಟಲ್ ಅನ್ನು ಮತ್ತೊಮ್ಮೆ ರೀ ಓಪನ್ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://gate.iitb.ac.in/ ಅಥವಾ https://appsgate.iitb.ac.in/ ಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರ ಬದಲಾವಣೆಯನ್ನು ಮಾಡಿಕೊಳ್ಳಬಹುದು.
ಗೇಟ್ 2021 ಪರೀಕ್ಷೆಯ ಕೇಂದ್ರ ಬದಲಾವಣೆಗೆ ಡಿಸೆಂಬರ್ 14 ಮತ್ತು 15,2020ರಂದು ಮಾತ್ರ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು ಮತ್ತು ಈ ಅವಕಾಶ ಮತ್ತೊಮ್ಮೆ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗೇಟ್ 2021ರ ಪರೀಕ್ಷೆಯು ಫೆಬ್ರವರಿ ತಿಂಗಳಿನಲ್ಲಿ ನಡೆಸಲಾಗುತ್ತದೆ. 2021ರ ಜನವರಿ ತಿಂಗಳಿನಲ್ಲಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಿದ್ದು, ಮಾರ್ಚ್ ತಿಂಗಳ ಕೊನೆಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.