GATE 2022 Admit Card Release Date : ಗೇಟ್ ಪರೀಕ್ಷೆಯ ಪ್ರವೇಶ ಪತ್ರ ಜ.7ರಂದು ಪ್ರಕಟ

ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್‌ ಇನ್‌ ಇಂಜಿನಿಯರಿಂಗ್(ಗೇಟ್) 2022ರ ಪ್ರವೇಶ ಪತ್ರ ಬಿಡುಗಡೆ ಮಾಡುವ ದಿನಾಂಕವನ್ನು ಮುಂದೂಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಈ ಸುದ್ದಿಯನ್ನು ಗಮನಿಸತಕ್ಕದ್ದು. ಗೇಟ್ 2022ರ ಪ್ರವೇಶ ಪತ್ರವನ್ನು ಜನವರಿ 7,2022ರಂದು ಬಿಡುಗಡೆ ಮಾಡಲಿದ್ದು, ಪ್ರವೇಶ ಪತ್ರ ಪ್ರಕಟವಾದ ಬಳಿಕ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಗೇಟ್ ಪರೀಕ್ಷೆ 2022ರ ಪ್ರವೇಶ ಪತ್ರ ಜ.7ಕ್ಕೆ ರಿಲೀಸ್

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಕರಗ್‌ಪುರ್ ‌2022ರ ಗೇಟ್ ಪರೀಕ್ಷೆಯನ್ನು ಆಯೋಜಿಸುತ್ತಿದ್ದು, ಪರೀಕ್ಷೆಯು ಫೆಬ್ರವರಿ 5,2022 ರಿಂದ ಫೆಬ್ರವರಿ 13,2022ರ ವರೆಗೆ ಎರಡು ಅವಧಿಗಳಲ್ಲಿ ನಡೆಯಲಿದೆ. ಮೊದಲ ಅವಧಿಯು ಬೆಳಿಗ್ಗೆ 9 ರಿಂದ 12ರ ವರೆಗೆ ಮತ್ತು ಎರಡನೇ ಅವಧಿಯು ಮಧ್ಯಾಹ್ನ 2:30 ರಿಂದ ಸಂಜೆ 5:30ರ ವರೆಗೆ ನಡೆಯಲಿದೆ.

GATE 2022 ಬ್ರಾಂಚ್ ವೈಸ್ ಪರೀಕ್ಷಾ ದಿನಾಂಕದ ಪ್ರಕಾರ ಫೆಬ್ರವರಿ 5, ಫೆಬ್ರವರಿ 6, ಫೆಬ್ರವರಿ 12 ಮತ್ತು ಫೆಬ್ರವರಿ 13, 2022 ರಂದು ಆಪ್ಟಿಟ್ಯೂಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಫೆಬ್ರವರಿ 4 ಮತ್ತು ಫೆಬ್ರವರಿ 11 ರಂದು ಸ್ಕ್ರೈಬ್‌ಗಳ ಆಯ್ಕೆ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ (ಯಾವುದಾದರೂ ಇದ್ದರೆ) ಮೀಸಲಿಡಲಾಗಿದೆ. ನೈರ್ಮಲ್ಯೀಕರಣ ಮತ್ತು ಇತರ ಚಟುವಟಿಕೆಗಳನ್ನು ಒಳಗೊಂಡಂತೆ ಪರೀಕ್ಷಾ ಕೇಂದ್ರದ ತಯಾರಿ (ಪೋಸ್ಟರ್‌ಗಳು, ಸೈನ್‌ಬೋರ್ಡ್, ಆಸನ ವ್ಯವಸ್ಥೆಗಳು ಇತ್ಯಾದಿ) ಮತ್ತು ಪರೀಕ್ಷಾ ಕೇಂದ್ರವನ್ನು ಪರೀಕ್ಷಿಸಲು ಅಭ್ಯರ್ಥಿಗಳು ಇಚ್ಚಿಸಿದಲ್ಲಿ ಭೇಟಿ ನೀಡಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಐಐಟಿ ದೆಹಲಿಯ ಅಧಿಕೃತ ವೆಬ್‌ಸೈಟ್‌ https://gate.iitkgp.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Admit Card is now available for download ಮುಂದಿರುವ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು ಎನ್‌ರೋಲ್ಮೆಂಟ್ ಐಡಿ/ ಇ-ಮೇಲ್ ವಿಳಾಸ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಗೇಟ್ ಪರೀಕ್ಷೆ 2022 :

ಎಂಜಿನಿಯರಿಂಗ್‌ ಅಭ್ಯರ್ಥಿಗಳಿಗೆ ಉದ್ಯೊಗ ಪಡೆಯಲು, ಅಂತೆಯೇ ಉನ್ನತ ಶಿಕ್ಷ ಣಕ್ಕೆ ಇದು ವೇದಿಕೆಯಾಗಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದವರು ಪ್ರತಿಷ್ಠಿತ ಶಿಕ್ಷ ಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷ ಣ ಪಡೆಯಲು ಅವಕಾಶ ಪಡೆಯಲಿದ್ದಾರೆ. ಅಲ್ಲದೆ ಸರಕಾರದ ವಿವಿಧ ಸ್ಕಾಲರ್‌ಶಿಪ್‌, ಸಹಾಯ ಧನ ಪಡೆಯಲು ಅರ್ಹರಾಗುತ್ತಾರೆ. ಉದ್ಯೊಗ ಆಕಾಂಕ್ಷಿಗಳಿಗೆ ಇದು ಅರ್ಹತಾ ಪರೀಕ್ಷೆಯಾಗಿರುತ್ತದೆ. ತೈಲ ಕಂಪನಿಗಳು, ಬಾಬಾ ಅಟೋಮಿಕ್‌ ರಿಸರ್ಚ್‌ ಸೆಂಟರ್‌, ಬಿಎಚ್‌ಇಎಲ್‌, ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳು 'ಗೇಟ್‌' ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ರ್ಯಾಂಕಿಂಗ್‌ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ. ಇದೇ ರ್ಯಾಂಕಿಂಗ್‌ ಮೇಲೆ ವೇತನ ನಿಗದಿಪಡಿಸಲಾಗುತ್ತದೆ.

ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಕ್ಕಾಗಿ ಮತ್ತು ಕೆಲವು ಸಾರ್ವಜನಿಕ ವಲಯದ ಕಂಪನಿಗಳಿಗೆ ನೇಮಕಾತಿಗಾಗಿ ನಡೆಸಲಾಗುವ ಗೇಟ್ ಅನ್ನು ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿ ನಡೆಸಲಾಗುತ್ತದೆ. ಗೇಟ್ 2022 ಪತ್ರಿಕೆಯು ವಸ್ತುನಿಷ್ಠ ಪ್ರಕಾರದ ಮೂರು ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಬಹು ಆಯ್ಕೆಯ ಪ್ರಶ್ನೆಗಳು (MCQ ಗಳು), ಬಹು ಆಯ್ದ ಪ್ರಶ್ನೆಗಳು (MSQ ಗಳು) ಮತ್ತು ಸಂಖ್ಯಾತ್ಮಕ ಉತ್ತರ ಪ್ರಕಾರ (NAT) ಪ್ರಶ್ನೆಗಳಿರುತ್ತವೆ. MCQ ನಲ್ಲಿ ಗುರುತಿಸಲಾದ ಪ್ರತಿಯೊಂದು ತಪ್ಪು ಉತ್ತರಕ್ಕೂ ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಆದರೆ MSQ ಗಳು ಮತ್ತು NAT ಗಳಿಗೆ ತಪ್ಪು ಉತ್ತರಕ್ಕೆ ಯಾವುದೇ ಋಣಾತ್ಮಕ ಅಂಕಗಳು ಇರುವುದಿಲ್ಲ.
ಈ ವರ್ಷ ಗೇಟ್ 2022 ಪರೀಕ್ಷೆಯಲ್ಲಿ ಎರಡು ಹೊಸ ವಿಷಯ ಪತ್ರಿಕೆಗಳನ್ನು ಪರಿಚಯಿಸಲಾಗಿದೆ. ಅವುಗಳೆಂದರೆ GE (ಜಿಯೋಮ್ಯಾಟಿಕ್ಸ್ ಇಂಜಿನಿಯರಿಂಗ್) ಮತ್ತು NM (ನೇವಲ್ ಆರ್ಕಿಟೆಕ್ಚರ್ ಮತ್ತು ಮೆರೈನ್ ಇಂಜಿನಿಯರಿಂಗ್, ಒಟ್ಟು ಗೇಟ್ 29 ಪೇಪರ್‌ಗಳನ್ನು ಒಳಗೊಂಡಿದೆ. ಗೇಟ್ 2022 ಗೆ ಹಾಜರಾಗಲು ಅರ್ಹತೆಯ ಮಾನದಂಡಗಳನ್ನು ವಿಸ್ತರಿಸಲಾಗಿದ್ದು, ಬಿಡಿಎಸ್ ಮತ್ತು ಎಂಫಾರ್ಮ್ ಪದವಿ ಹೊಂದಿರುವವರು ಸಹ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
GATE 2022 admit card release date postponed. When and how to download admit card here is the steps.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X