GATE 2022 Result Declared : ಗೇಟ್ ಫಲಿತಾಂಶ ವೀಕ್ಷಿಸುವುದು ಹೇಗೆ ?

ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (GATE) 2022 ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಗೇಟ್ 2022 ಫಲಿತಾಂಶ ರಿಲೀಸ್

ಗೇಟ್ ಫಲಿತಾಂಶವನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಖರಗ್‌ಪುರ ಅಧಿಕೃತ ವೆಬ್‌ಸೈಟ್ gate.iitkgp.ac ನಲ್ಲಿ ಪ್ರಕಟಿಸಲಾಗಿದ್ದು, ಮಾರ್ಚ್ 21 ರಂದು ಗೇಟ್ 2022 ಸ್ಕೋರ್‌ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಇಂಜಿನಿಯರಿಂಗ್ ಪದವೀಧರರ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 5 ರಿಂದ ಫೆಬ್ರವರಿ 13ರ ನಡುವೆ ನಡೆಸಲಾಯಿತು. ಫೆಬ್ರವರಿ 21 ರಂದು ಗೇಟ್ 2022 ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಯಿತು, ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಹ ಆಹ್ವಾನಿಸಲಾಗಿತ್ತು. ತದನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.

ಗೇಟ್ 2022 ಫಲಿತಾಂಶ ಡೌನ್‌ಲೋಡ್ ಮಾಡುವುದು ಹೇಗೆ :

ಸ್ಟೆಪ 1 : ಅಧಿಕೃತ ವೆಬ್‌ಸೈಟ್‌ gate.iitkgp.ac.in ಗೆ ಲಾಗಿನ್ ಮಾಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ನೊಂದಣಿ ಸಂಖ್ಯೆ, ಪಾಸ್‌ವರ್ಡ್ ಅಥವಾ ಇಮೇಲ್ ಐಡಿ ನೀಡಿ ಲಾಗಿನ್ ಮಾಡಿ
ಸ್ಟೆಪ್ 4 : ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುತ್ತದೆ ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

GATE 2022 ಫಲಿತಾಂಶದಲ್ಲಿ ಉಲ್ಲೇಖಿಸಿರುವ ಮಾಹಿತಿ :

GATE 2022 ಫಲಿತಾಂಶದಲ್ಲಿ ಏನೆಲ್ಲಾ ಮಾಹಿತಿಯನ್ನು ನೀಡಲಾಗಿದೆ ಎಂದು ಇಲ್ಲಿ ತಿಳಿಸಲಾಗಿದೆ.

* ಅಭ್ಯರ್ಥಿಯ ಹೆಸರು ಮತ್ತು ರೋಲ್ ಸಂಖ್ಯೆ
* ಪರೀಕ್ಷೆಯ ವಿಷಯದ ವಿವರಗಳು
* ಪಡೆದುಕೊಂಡ ಅಂಕಗಳು
* ಕನಿಷ್ಠ ಅಂಕಗಳ ಅಗತ್ಯ
* ಒಟ್ಟು ಅಂಕಗಳು
* ಅರ್ಹತಾ ಸ್ಥಿತಿ

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
GATE 2022 results declared, how to check results ; here is the details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X