ಜನರಲ್ ಇನ್ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ (ಜಿಐಸಿ ಆಫ್ ಇಂಡಿಯಾ) ಸ್ಕೇಲ್ I ಅಧಿಕಾರಿ ಹುದ್ದೆಗಳ ಆನ್ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಜಿಐಸಿ ಆಫ್ ಇಂಡಿಯಾ 44 ಸ್ಕೇಲ್ I ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 29,2021ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೇ 9,2021ರಂದು ನಡೆಯುವ ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಜಿಐಸಿ ಆಫ್ ಇಂಡಿಯಾ ಸ್ಕೇಲ್ I ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ https://www.gicofindia.com/en/ ಗೆ ಭೇಟಿ ನಿಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಆನ್ಲೈನ್ ನಲ್ಲಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.