ಜನರಲ್ ಇನ್‌ಶುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ (ಜಿಐಸಿ) ಅಧಿಕಾರಿ ಸ್ಕೇಲ್ I ಹುದ್ದೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಜಿಐಸಿ 44 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 29,2021ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಪರೀಕ್ಷೆಯನ್ನು ಆಗಸ್ಟ್ 29,2021ರಂದು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.
ಜಿಐಸಿ ಅಧಿಕಾರಿ ಸ್ಕೇಲ್ I ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.gicofindia.com/en/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಕೆರಿಯರ್ಸ್ ಆಯ್ಕೆ ಮಾಡಿ
ಸ್ಟೆಪ್ 3: ನಂತರ ಸ್ಕೇಲ್ I ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 5: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











