ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಸ್ಕೇಲ್ I ಅಧಿಕಾರಿ ಹುದ್ದೆಗಳ ನೇಮಕಾತಿಯ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಜಿಐಸಿ ಒಟ್ಟು 25 ಸ್ಕೇಲ್ I ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 11,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1 : ಅಭ್ಯರ್ಥಿಗಳು ಜನರಲ್ ಇನ್ಶುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.gicofindia.com/en/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ Lates news-recruitment of scale I officers- "click here to download admit card" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್
ಮಾಡಿಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











