ಕುವೆಂಪು ಎಂದರೆ ಗೂಗಲ್ ಕೂಡ ತಲೆಬಾಗುತ್ತದೆ

ಕುವೆಂಪು ಅವರ 116ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಕೆ ಮಾಡಿದೆ. ವಿಶ್ವಮಾನವ ಸಂದೇಶ ನೀಡಿದ ಮಹಾಕವಿ ಕುವೆಂಪು ಅವರ ಸರಳ ಜೀವನ ಸರ್ವರಿಗೂ ಮಾದರಿ. ಕುವೆಂಪು ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ.

'ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು' ಎಂದು ಹೇಳಿದ ರಾಷ್ಟ್ರಕವಿ ಹೆಸರನ್ನು ಕೇಳಿದರೆ ಪ್ರತಿ ಕನ್ನಡಿಗನ ಎದೆಯು ಹರುಷಗೊಳ್ಳುವುದು. ಏಕೆಂದರೆ ಕುವೆಂಪು ಎಂದರೆ ಕೇವಲ ಕನ್ನಡ ಸಾಹಿತ್ಯವಲ್ಲ, ಅವರು ಕನ್ನಡ ಉಸಿರು.

ಕುವೆಂಪು ಅವರ 116ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಕೆ ಮಾಡಿದೆ.

ಇಂದು ರಸಋಷಿ ಕುವೆಂಪು ಅವರ 116ನೇ ಜನ್ಮ ದಿನಾಚರಣೆಯಾಗಿದ್ದು, ಗೂಗಲ್ ತನ್ನ ಮುಖಪುಟದಲ್ಲಿ ಕುವೆಂಪು ಭಾವ ಚಿತ್ರವಿರುವ ಕನ್ನಡಲೇ ಗೂಗಲ್ ಎಂದು ಬರೆದಿರುವ ಡೂಡಲ್ ಮೂಲಕ ವಿಶೇಷ ಗೌರವ ಸಲ್ಲಿಕೆ ಮಾಡಿದೆ.

ಕುವೆಂಪು ಜನ್ಮದಿನ

ವಿಶ್ವಮಾನವ ಸಂದೇಶ ನೀಡಿದ ಮಹಾಕವಿ ಕುವೆಂಪು ಅವರ ಸರಳ ಜೀವನ ಸರ್ವರಿಗೂ ಮಾದರಿ. ಕುವೆಂಪು ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಎಲ್ಲ ಪ್ರಕಾರಗಳಲ್ಲೂ ಕುವೆಂಪು ಸಾಹಿತ್ಯ ಸೇವೆ ಕಾಣಬಹುದು.

ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಪ್ರಸಿದ್ಧ ಕಾದಂಬರಿಗಳು.

ರಾಷ್ಟ್ರಕವಿ ಕುವೆಂಪುರವರು ಹುಟ್ಟಿದ್ದು ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಕುವೆಂಪು ಬಾಲ್ಯದಲ್ಲಿಯೇ ಸಾಹಿತ್ಯದ ಸಹವಾಸ ಮಾಡಿದರು, ಮುಂದೆ ಅದೇ ಅವರನ್ನು ರಾಷ್ಟ್ರಕವಿಯನ್ನಾಗಿಸಿತು.

ಕುವೆಂಪು ಬಾಲ್ಯ

ಕುವೆಂಪು ಅವರು ಡಿಸೆಂಬರ್ 29, 1904ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.

ಶಿಕ್ಷಣ

ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು.

ಕುವೆಂಪು ಗುರು ಭಕ್ತಿ

ಕುವೆಂಪು ಜೀವನದಲ್ಲಿ ಬಹುದೊಡ್ಡ ಪಾತ್ರ ಅವರ ಗುರುಗಳಾದ ಟಿ.ಎಸ್.ವೆಂಕಣ್ಣಯ್ಯನವರು. ಗುರುವಿನ ಬಗ್ಗೆ ಅಪಾರ ಗೌರವ ಹೊಂದಿದ್ದ ಕುವೆಂಪು ತಮ್ಮ ಜ್ಞಾನಪೀಠ ಕೃತಿಯನ್ನು ವೆಂಕಣ್ಣಯ್ಯನವರಿಗೆ ಅರ್ಪಿಸಿದ್ದಾರೆ.

ವೃತ್ತಿಜೀವನ

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.

ಪ್ರಶಸ್ತಿ, ಪುರಸ್ಕಾರ, ಗೌರವ

'ಶ್ರೀರಾಮಾಯಣ ದರ್ಶನಂ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. ಪದ್ಮಭೂಷಣ, ರಾಷ್ಟ್ರಕವಿ ಪುರಸ್ಕಾರ, ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್., 'ಶ್ರೀರಾಮಾಯಣ ದರ್ಶನಂ' ಕೃತಿಗೆ ಭಾರತೀಯ ಜ್ಞಾನಪೀಠ ಪ್ರಶಸ್ತಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್., ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್, ಪಂಪ ಪ್ರಶಸ್ತಿ, ಪದ್ಮವಿಭೂಷಣ, ಕರ್ನಾಟಕ ರತ್ನ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ, ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ (ಮರಣೋತ್ತರ), ಕರ್ನಾಟಕ ಸರ್ಕಾರವು 2015ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ 29 ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Google Doodle celebrates the 116th birthday of Kannada novelist and poet, Kuppali Venkatappa Puttappa, better known as Kuvempu. Widely regarded as the greatest Kannada poet, Kuvempu was also a playwright, critic and thinker.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X