ಈ ಬಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುರಕ್ಷಿತ ಕ್ರಮಗಳೊಂದಿಗೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಒಂದು ಮೀಟರ್ ಅಂತರದಲ್ಲಿ ಕುಳಿತುಕೊಳ್ಳುವುದು ಸೇರಿದಂತೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗೆ ಸುರಕ್ಷತೆಯ ದೃಷ್ಠಿಯಿಂದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು, ಇದಕ್ಕಾಗಿ ಹೆಚ್ಚುವರಿ ಕೊಠಡಿಗಳನ್ನು ಕಾಯ್ದಿರಿಸಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.
ಕೊರೋನಾ ಪರಿಣಾಮದಿಂದಾಗಿ ಅಗತ್ಯ ಬಿದ್ದಲ್ಲಿ ವಲಸೆ ಕಾರ್ಮಿಕರ ಮಕ್ಕಳಿಗೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸುವುದರ ಬಗ್ಗೆ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ, ಪರೀಕ್ಷೆಗಿಂತ ಮೊದಲು ಪ್ರತಿ ವಿದ್ಯಾರ್ಥಿ ಮತ್ತು ಪೋಷಕರನ್ನು ಭೇಟಿ ಮಾಡಿ ಪರೀಕ್ಷೆ ಮತ್ತು ಸುರಕ್ಷಿತ ಪರೀಕ್ಷಾ ವಾತವರಣದ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದಾಗಿ ತಿಳಿಸಿದ್ದಾರೆ.


Click it and Unblock the Notifications











