ಶಾಲೆ ಕಾಲೇಜು ಪುನರಾರಂಭದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್ ಹೇಳಿಕೆ

ರಾಜ್ಯದಲ್ಲಿ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಾಲೆ ಮತ್ತು ಕಾಲೇಜು ಪ್ರಾರಂಭದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಚಿವರು, ಶಾಲಾ- ಕಾಲೇಜುಗಳ ಆರಂಭ ಕುರಿತು ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಸಲಹೆ ನೀಡಿದ್ದಾರೆ.

ಸರ್ಕಾರ ತಾನಾಗಿಯೇ ಯಾವುದೇ ನಿರ್ಣಯ ಅಧಿಕೃತವಾಗಿ ಪ್ರಕಟಿಸುವ ಮುನ್ನ ಮಾಧ್ಯಮದಲ್ಲಿ ಪ್ರಸಾರವಾಗುವ ಅಥವಾ ಪ್ರಕಟವಾಗುವ ಯಾವುದೇ ಸುದ್ದಿಯನ್ನು ನಿಜ ಎಂದು ನಂಬಬೇಡಿ. ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದೂ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Government not taken any decisions about to start school and colleges said by minister S.Suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+