ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿ ನಿಯಮ ಪ್ರಕಟ

Posted By:

ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಗಣಿತ, ವಿಜ್ಞಾನ ಹಾಗೂ ಭಾಷಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿ ಸೂಕ್ತ ನಿಯಮ ರೂಪಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕ ನಿಯಮ-2017ರ ಪ್ರಕಾರ, ಕಿರಿಯ ಪ್ರಾಥಮಿಕ ಶಾಲೆಗೆ (1ರಿಂದ 5ನೇ ತರಗತಿ) ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ (6ರಿಂದ 8ನೇ ತರಗತಿಗೆ) ಪಾಠ ಮಾಡುವ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಶಿಕ್ಷಕರ ನೇಮಕಾತಿ ನಿಯಮ ಪ್ರಕಟ

ಕಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿ

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (1ರಿಂದ 5ನೇ ತರಗತಿ) ಶಿಕ್ಷಕರ ಹುದ್ದೆಗೆ ನೇಮಕಗೊಳ್ಳುವವರು ಶೇ.50ರಷ್ಟು ಅಂಕದೊಂದಿಗೆ ಪಿಯುಸಿ ಮತ್ತು ಪ್ರಾಥಮಿಕ ಶಿಕ್ಷಣ ವಿಭಾಗದಲ್ಲಿ ಎರಡು ವರ್ಷದ ಡಿಪ್ಲೊಮಾ ಕೋರ್ಸ್ ಅಥವಾ ಶೇ.50ರಷ್ಟು ಅಂಕದೊಂದಿಗೆ ಪಿಯುಸಿ ಮತ್ತು ನಾಲ್ಕು ವರ್ಷದ ಪ್ರಾಥಮಿಕ ಶಿಕ್ಷಣ ಪದವಿ ಕೋರ್ಸ್ ಪೂರೈಸಿರಬೇಕು.

ಸರ್ಕಾರಿ ಹಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿ

ಗ್ರಾಜುಯೇಟ್ ಪ್ರೈಮರಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಶೇ.50ರಷ್ಟು ಅಂಕದೊಂದಿಗೆ ಪದವಿ ಶಿಕ್ಷಣ ಹಾಗೂ ಎರಡು ವರ್ಷದ ಪ್ರಾಥಮಿಕ ಶಿಕ್ಷಣ ಡಿಪ್ಲೊಮಾ ಕೋರ್ಸ್ ಪೂರೈಸಿದ ಅಥವಾ ರಾಜ್ಯ ಅಥವಾ ಕೇಂದ್ರ ಸರಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಭಾಷಾ ವಿಷಯದ ಶಿಕ್ಷಕರ ಆಯ್ಕೆ

ಭಾಷಾ ವಿಷಯದ ಶಿಕ್ಷಕರ ಆಯ್ಕೆಗೆ ಸಂಬಂಧಿಸಿ ಸಂಬಂಧಪಟ್ಟ ಭಾಷಾ ವಿಷಯದಲ್ಲಿ ಶೇ.50ರಷ್ಟು ಅಂಕ ಅಥವಾ ರಾಜ್ಯ ಸರಕಾರ ಅಥವಾ ಕೇಂದ್ರ ಸರಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಮೆರಿಟ್ ಆಧಾರದಲ್ಲಿ ಆಯ್ಕೆ ಪಟ್ಟಿ, ಮೀಸಲು ಕೋಟಾದಡಿ ಸೀಟುಗಳ ಪಟ್ಟಿ ಹಾಗೂ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

English summary
Government of Karnataka has set new rule to appoint primary school teachers. Teachers are recruited through entrance exam and interview.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia