ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್: ತಲೆಯೆತ್ತಲಿವೆ ಗೌರ್ನ್ಮೆಂಟ್ ಇಂಗ್ಲಿಷ್ ಸ್ಕೂಲ್

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗ ಆರಂಭಿಸಲು ರಾಜ್ಯ ಸರಕಾರ ಮುಂದಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗ ಆರಂಭಿಸಲು ರಾಜ್ಯ ಸರಕಾರ ಮುಂದಾಗಿದೆ.

ಬೆಂಗಳೂರಿನ ಹೆಚ್ಎಎಲ್ ನ್ಯೂ ಪಬ್ಲಿಕ್ ಸ್ಕೂಲ್ ನೇಮಕಾತಿಬೆಂಗಳೂರಿನ ಹೆಚ್ಎಎಲ್ ನ್ಯೂ ಪಬ್ಲಿಕ್ ಸ್ಕೂಲ್ ನೇಮಕಾತಿ

ಸರಕಾರಿ ಪ್ರೌಢಶಾಲೆ/ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ಗಳ 8ನೇ ತರಗತಿಯಲ್ಲಿ ಕನ್ನಡ, ಉರ್ದು ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ ಆರಂಭಿಸುವ ಪ್ರಸ್ತಾವನೆಯನ್ನು ಏಪ್ರಿಲ್ 30ರೊಳಗೆ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಎನ್‌ಸಿಇಆರ್‌ಟಿ: 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಅಳೆಯಲು ಪರೀಕ್ಷೆ

ಗೌರ್ನ್ಮೆಂಟ್ ಇಂಗ್ಲಿಷ್ ಸ್ಕೂಲ್

ಆಂಗ್ಲ ಮಾಧ್ಯಮಕ್ಕೆ ಪೂರಕವಾದ ಶಾಲೆಗಳಲ್ಲಿ ಮಾತ್ರ ಆರಂಭಿಸಲು ಚಿಂತಿಸಿದ್ದು, ಈ ವರ್ಷದ ಮಾರ್ಚ್‌ 15ರೊಳಗೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲೆಯಲ್ಲಿನ ಹಾಜರಾತಿ, ಇಂಗ್ಲಿಷ್ ಬೋಧನೆ ಮಾಡುವುದಾಗಿ ಶಿಕ್ಷಕರಿಂದ ಒಪ್ಪಿಗೆ ಪತ್ರ, ಇಂಗ್ಲಿಷ್ ಮಾಧ್ಯಮಕ್ಕೆ ದಾಖಲಾಗಬಹುದಾದ ವಿದ್ಯಾರ್ಥಿಗಳ ಸಂಖ್ಯೆಯ ಮಾಹಿತಿ ಸಹಿತ ಪ್ರಸ್ತಾವನೆ ಸಲ್ಲಿಸಬೇಕು.

ಆಂಗ್ಲ ಮಾಧ್ಯಮ ಆರಂಭಿಸಲು ಷರತ್ತುಗಳು

ಸರಕಾರಿ ಪ್ರೌಢಶಾಲೆ ಪ್ರಾರಂಭವಾದ ವರ್ಷ ಮತ್ತು ಆದೇಶದ ಪ್ರತಿ ಒದಗಿಸಬೇಕು. ಶಾಲೆಯಲ್ಲಿನ ಪ್ರಸ್ತುತ ವಿದ್ಯಾರ್ಥಿಗಳ ಹಾಜರಾತಿ/ದಾಖಲಾತಿ ಮಾಹಿತಿ ಒದಗಿಸಬೇಕು. ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಒಪ್ಪಿದ ಹಾಗೂ ಬೇಕಾದ ಎಲ್ಲ ವ್ಯವಸ್ಥೆ ಮಾಡುವ ಬಗ್ಗೆ ಎಸ್‌ಡಿಎಂಸಿ ನಡಾವಳಿ ದಾಖಲಿಸಬೇಕು. ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ, ಹೆಸರು, ಪದನಾಮ ಹಾಗೂ ಒಪ್ಪಿಗೆ ಪತ್ರ ಸಲ್ಲಿಸಬೇಕು. ಆಂಗ್ಲ ಮಾಧ್ಯಮ ವಿಭಾಗಕ್ಕೆ ದಾಖಲಾಗಬಹುದಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ದೃಢೀಕರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.

ಒಂದು ವೇಳೆ ಶಿಕ್ಷಕರು ಹಾಗೂ ಕೊಠಡಿ ಇಲ್ಲದೇ ಇದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿ ಹಂತದಲ್ಲೇ ‍ಪ್ರಸ್ತಾವನೆ ತಿರಸ್ಕರಿಸಬೇಕು ಎಂದೂ ಸೂಚಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 4,500 ಸರಕಾರಿ ಪ್ರೌಢಶಾಲೆಗಳಿವೆ. ಯಾವ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ವಿಭಾಗ ಆರಂಭಿಸಲು ಅಗತ್ಯ ಮೂಲಸೌಕರ‍್ಯದ ಜತೆಗೆ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಇಂಗ್ಲಿಷ್‌ನಲ್ಲಿ ಬೋಧಿಸುವ ಶಿಕ್ಷಕರ ಸೇವೆ ಲಭ್ಯವಿದೆಯೋ ಅಂಥವು ಪ್ರಸ್ತಾವನೆ ಸಲ್ಲಿಸಬಹುದು. ಅಲ್ಲದೆ ಇಂಗ್ಲಿಷ್‌ ಮಾಧ್ಯಮ ವಿಭಾಗ ಆರಂಭಿಸುವ ಪ್ರೌಢಶಾಲೆಗಳಿಗೆ ನಾವು ಶಿಕ್ಷಕರನ್ನು ನೇಮಕ ಮಾಡುವುದಿಲ್ಲ. ಹೆಚ್ಚುವರಿ ಶಿಕ್ಷಕರನ್ನು ಉಳಿಸಿಕೊಳ್ಳಲು ಇಂಗ್ಲಿಷ್‌ ಮಾಧ್ಯಮ ವಿಭಾಗ ತೆರೆಯಲು ಶಾಲೆಗಳು ಪ್ರಸ್ತಾವನೆ ಸಲ್ಲಿಸುವಂತಿಲ್ಲ, ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕಿ (ಪ್ರೌಢ ಶಿಕ್ಷಣ) ಫಿಲೋಮಿನಾ ಲೋಬೋ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
The state government is planning to launch English medium in government high schools from the next academic year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X