ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಪ್ರವೇಶ ಪತ್ರ ಬಿಡುಗಡೆ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ 10,611 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಏಪ್ರಿಲ್ 25,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಶಾಲಾ ಶಿಕ್ಷಕರ ನೇಮಕಾತಿ ಪ್ರವೇಶ ಪತ್ರ ಬಿಡುಗಡೆ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ( 6 ರಿಂದ 8 ನೇ ತರಗತಿ) ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ (ಪರೀಕ್ಷೆ-2) ದಿನಾಂಕ 25-5-2019 ಹಾಗೂ ಹಾಗೂ 26-5-2019 ರಂದು ರಾಜ್ಯದ ಎಲ್ಲಾ 34 ಜಿಲ್ಲೆಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನ ಮೂಲಕ ಸದರಿ ಪರೀಕ್ಷೆಯ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳಲ್ಲಿ ಯಾವುದೇ ವ್ಯತ್ಯಾಸವಿದ್ದಲ್ಲಿ ಕೂಡಲೇ ಕೇಂದ್ರೀಕೃತ ದಾಖಲಾತಿ ಘಟಕಕ್ಕೆ ದೂರವಾಣಿ ಮೂಲಕ ಸಂಪರ್ಕಿಸಬಹುದು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1 : ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/ ಗೆ ಹೋಗಿ

ಸ್ಟೆಪ್ 2: ನಂತರ "GPSTR- 2019 Generate Admission ticket for Examination-2" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಈಗ ಅಭ್ಯರ್ಥಿಗಳು ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿಯ ಪ್ರವೇಶ ಪತ್ರ ಬಿಡುಗಡೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Department Of Public Instruction relesed admit card 2019 of Graduate Primay School Teacher recruitment on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+