ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನೇಮಕಾತಿಯ ಫಲಿತಾಂಶ ರಿಲೀಸ್

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳ ನೇಮಕಾತಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಇಲಾಖೆಯು ಒಟ್ಟು 10,611 ಪದವೀಧರ ಶಾಲಾ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 25,2019ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹುದ್ದೆಗಳನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳ ಫಲಿತಾಂಶ ಪ್ರಕಟ

ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಜೂನ್ 1 ಮತ್ತು 2,2019ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಗಳಿಸಿದ ಅಂಕಗಳ ವಿವರವನ್ನು ಇಲಾಖೆಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಫಲಿತಾಂಶವನ್ನು ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://schooleducation.kar.nic.in/ ಗೆ ಭೇಟಿ ನೀಡಿ.

ಸ್ಟೆಪ್ 2 : ನಂತರ GPSTR -2019 ಮುಂದಿರುವ "Individual marks details of the candidates" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಸಬ್‌ಮಿಟ್ ಮಾಡಿ

ಸ್ಟೆಪ್ 4 : ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು

ಸ್ಟೆಪ್ 5 : ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಸ್ಟೆಪ್ 6 : ನಂತರ ಫಲಿತಾಂಶದ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
Karnataka teachers recruitment board relesed results for GPSTR posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X