ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದೆ.

ಕಂದಾಯ ಇಲಾಖೆಯು ಒಟ್ಟು 34 ಗ್ರಾಮಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಮೇ 7,2020ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ https://hassan.nic.in/ ನಲ್ಲಿ ಪ್ರಕಟಿಸಿದೆ.
ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಮೂಲಕ ಅವರು ನಮೂದಿಸಿರುವಂತೆ, ಅವರು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಪ್ರವರ್ಗಕ್ಕೆ ಸಂಬಂಧಿಸಿದಂತೆ ಒಟ್ಟು ಬಂದಿರುವ ಅರ್ಜಿಗಳಲ್ಲಿ 1:10 ಅನುಪಾತದ ಪ್ರಮಾಣದಲ್ಲಿ ಪರಿಶೀಲನಾ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದೆ.
ಈ ಪಟ್ಟಿಯು ಅಭ್ಯರ್ಥಿಗಳು ಅಂತರ್ಜಾಲದ ಮೂಲಕ ಸಲ್ಲಿಸಿರುವ ಮಾಹಿತಿಗಳನ್ನು ಪರಿಶೀಲನೆ ಮಾಡುವ ಸಲುವಾಗಿ ತಯಾರಿಸಿರುವ ಪರಿಶೀಲನಾ ಪಟ್ಟಿ ಮಾತ್ರವಾಗಿದ್ದು, ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಗೆ ನೇಮಕಾತಿಯ ಹಕ್ಕು ದೊರೆಯುವುದಿಲ್ಲ. ಮೂಲ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ನಂತರ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ಪರಿಶೀಲನಾ ಪಟ್ಟಿ ವೀಕ್ಷಿಸಲು ಮತ್ತು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











