ಆನ್‌ಲೈನ್ ಶಿಕ್ಷಣ ಕುರಿತು ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ಹೊರಹಾಕಿದೆ. ಈ ಹಿಂದೆ ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ಹೊರಡಿಸಿತ್ತು, ಈ ಆದೇಶಕ್ಕೆ ಹೈಕೋರ್ಟ್ ಈಗ ತಡೆ ನೀಡಿದೆ.

ರಾಜ್ಯದೆಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶೈಕ್ಷಣಿಕ ವರ್ಷದ ಮೇಲೆ ಹೆಚ್ಚು ಪ್ರಭಾವ ಬೀರಿದೆ. ಆನ್‌ಲೈನ್ ಶಿಕ್ಷಣ ವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದನ್ನು ಕುರಿತು ಪೋಷಕರು, ವಿದ್ಯಾರ್ಥಿಗಳು ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ ಪಿಐಎಲ್ ಕುರಿತು ಓಕ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ಹಾಕಿದೆ.
ಶಿಕ್ಷಣವು ವಿದ್ಯಾರ್ಥಿಗಳ ಮೂಲಭೂತ ಹಕ್ಕಾಗಿದ್ದು, ಆನ್‌ಲೈನ್ ಶಿಕ್ಷಣಕ್ಕೆ ಸರ್ಕಾರ ನಿರ್ಬಂಧ ಹೇರುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೈಕೋರ್ಟ್ ತೀರ್ಪು ನೀಡಿದ ಬಳಿಕ ಆನ್‌ಲೈನ್ ಶಿಕ್ಷಣಕ್ಕೆ ಇದ್ದಂತಹ ಎಲ್ಲ ಅಡೆತಡೆಗಳು ನಿವಾರಣೆಯಾದಂತಾಗಿದೆ. ಇತ್ತೀಚೆಗಷ್ಟೇ ಶಿಕ್ಷಣ ತಜ್ಞರ ಸಮಿತಿ ಕೂಡ ಆನ್‌ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿಗಳನ್ನು ಸಲ್ಲಿಸಿತ್ತು. ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನೀಡಬಹುದು ಎಂದು ಶಿಫಾರಸು ಮಾಡಿತ್ತು.


Click it and Unblock the Notifications











