ನೀಟ್ 2017ರ ಫಲಿತಾಂಶಕ್ಕೆ ಹೈಕೋರ್ಟ್ ತಡೆ

Posted By:

ಈಚೆಗೆ ನಡೆದಿದ್ದ 2017ನೇ ಸಾಲಿನ ವೈದ್ಯಕೀಯ ಕೋರ್ಸ್‌ಗಳ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (ನೀಟ್‌) ಫಲಿತಾಂಶ ಪ್ರಕಟಣೆಗೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮದ್ರಾಸ್ ಹೈಕೋರ್ಟ್ ಬುಧವಾರ ನಡೆದ ವಿಚಾರಣೆ ವೇಳೆ ಈ ತೀರ್ಪು ನೀಡಲಾಗಿದ್ದು, ನೀಟ್ ಪರೀಕ್ಷೆಯ ಫಲಿತಾಂಶಕ್ಕೆ ತಡೆಯಾಜ್ಞೆ ನೀಡಿದೆ.ಹಾಗಾಗಿ ಜೂನ್ 8ಕ್ಕೆ ಪ್ರಕಟವಾಗಬೇಕಿದ್ದ ಫಲಿತಾಂಶವು ಮುಂದೂಡುವ ಸಾಧ್ಯತೆ ಇದೆ.

ತಡೆಯಾಜ್ಞೆಗೆ ಕಾರಣ

ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಇಂಗ್ಲಿಷ್ ಪ್ರಶ್ನೆಗಳ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಆದರೆ ಪ್ರಾದೇಶಿಕ ಭಾಷೆಯ ಪ್ರಶ್ನೆಗೂ ಇಂಗ್ಲಿಷ್ ಪ್ರಶ್ನೆಗೂ ಸಾಕಷ್ಟು ವ್ಯತ್ಯಾಸಗಳಿದ್ದ ಕಾರಣ ಈ ಪ್ರಕರಣ ಕೋರ್ಟ್ ಮೆಟ್ಟಿಲಿರಿತ್ತು.

ನೀಟ್  ಫಲಿತಾಂಶಕ್ಕೆ ಹೈಕೋರ್ಟ್ ತಡೆ

ತಮಿಳುನಾಡಿನಲ್ಲಿ ತಮಿಳು ಮಾಧ್ಯಮದ ಪ್ರಶ್ನೆ ಪತ್ರಿಕೆಗಳಿಗೂ, ಇಂಗ್ಲಿಷ್ ಮಾಧ್ಯಮದ ಪ್ರಶ್ನೆ ಪತ್ರಿಕೆಗಳಿಗೂ ಭಾರಿ ವ್ಯತ್ಯಾಸವಿತ್ತು. ಹೀಗಾಗಿ ಎರಡೂ ಮಾಧ್ಯಮದವರಿಗೆ ಒಂದೇ ಪ್ರಶ್ನೆ ಪತ್ರಿಕೆ ನೀಡಿ, ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಕೆಲವು ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು

ಹಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸಲಾಗಿದ್ದು, ನ್ಯಾಯಮೂರ್ತಿ ಎಂ.ವಿ.ಮುರಳಿಧರನ್, ಭಾರತೀಯ ವೈದ್ಯಕೀಯ ಮಂಡಳಿ, ಸಿಬಿಎಸ್ಇ ಮತ್ತು ಕೇಂದ್ರ ಆರೋಗ್ಯ ಸಚಿವಾಲಯಗಳಿಗೆ ಜೂನ್ 7 ರೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿದ್ದಾರೆ.

ಗುಜರಾತ್ ನಲ್ಲೂ ಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು

ತಮಿಳುನಾಡು ಮಾತ್ರವಲ್ಲದೇ ಗುಜರಾತಿನಲ್ಲೂ ಇದೇ ರೀತಿಯ ಪ್ರಕರಣ ನಡೆದಿದೆ. ಗುಜರಾತಿ ಭಾಷೆಯಲ್ಲಿದ್ದ ಪ್ರಶ್ನೆಗಳು ಅರ್ಥವಾಗದೇ ಪರೀಕ್ಷೆಗಳು ಕ್ಲಿಷ್ಟವಾಗಿದ್ದರಿಂದ ಪುನಃ ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳು ಮತ್ತು ಪಾಲಕರು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮೇ 26ಕ್ಕೆ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

English summary
Madurai bench of Madras HC granted an interim stay on release of National Eligibility cum Entrance Test (NEET) examination results which is scheduled to be declared on June 8.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia