Hijab Row Schools And Colleges Shut : ಕರ್ನಾಟಕದ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಹೈಕೋರ್ಟ್‌ನಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಹಿಜಾಬ್ ತೀರ್ಪು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಬೆಳಿಗ್ಗೆ 10:30ಕ್ಕೆ ತೀರ್ಪು ಪ್ರಕಟವಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಗರದಾದ್ಯಂತ ನಾಳೆಯಿಂದ ಒಂದು ವಾರ 144 ಸೆಕ್ಷನ್ ಜಾರಿ ಮಾಡಿ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಶಾಲಾ-ಕಾಲೇಜುಗಳಲ್ಲಿನ ಸಮವಸ್ತ್ರ ಮತ್ತು ಅವುಗಳ ಜಾರಿಗೆ ಸಂಬಂಧಿಸಿದ ನಿಯಮಗಳನ್ನು ಒಳಗೊಂಡಿರುವುದರಿಂದ ತೀರ್ಪಿನ ಘೋಷಣೆಯ ನಂತರ ನಗರದಲ್ಲಿ ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸುವುದು ಸೂಕ್ತ ಎಂದು ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. "ಮಾರ್ಚ್ 15 ರಿಂದ ಮಾರ್ಚ್ 21 ರವರೆಗೆ ಒಂದು ವಾರದವರೆಗೆ ಬೆಂಗಳೂರಿನಲ್ಲಿ ಎಲ್ಲಾ ರೀತಿಯ ಸಭೆಗಳು, ಆಂದೋಲನಗಳು, ಪ್ರತಿಭಟನೆಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗಳನ್ನು ನಿಷೇಧಿಸಲಾಗಿದೆ" ಎಂದು ಬೆಂಗಳೂರಿನ ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಚಾರ್ಜ್‌ಶೀಟ್ ನಲ್ಲಿರುವ ಪ್ರಮುಖ ಅಂಶಗಳು :

* ಮಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಮಾರ್ಚ್ 15 ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
* ಮಂಗಳೂರಿನಲ್ಲಿ ಜಿಲ್ಲಾದ್ಯಂತ ಈಗಾಗಲೇ ‌ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ‌ಮುಂದುವರಿಯುತ್ತವೆ. ಆದರೆ ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶ ಹೊರಡಿಸಲಾಗಿದೆ.
* ಮಾರ್ಚ್ 15 ಮತ್ತು ಮಾರ್ಚ್ 21 ರ ನಡುವೆ 7 ದಿನಗಳ ಕಾಲ ನಗರದ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ರೀತಿಯ ಆಚರಣೆಗಳನ್ನು ನಿಷೇಧಿಸಲಾಗಿದೆ.
* ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಶಾಲಾ, ಕಾಲೇಜುಗಳ ಮುಂದೆ ನಾಳೆ ಪೊಲೀಸ್ ಬಂದೋಬಸ್ತ್ ನಿಯೋಜನೆ ಕೈಗೊಳ್ಳವ ಬಗ್ಗೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ.
* ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ವಿಶೇಷ ತ್ರಿಸದಸ್ಯ ಪೀಠವು ತೀರ್ಪು ಪ್ರಕಟಿಸಲಿದೆ.
* ತ್ರಿಸದಸ್ಯ ಪೀಠವು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನೆಸಾ ಮೊಹಿಯುದ್ದೀನ್ ಅವರನ್ನೂ ಒಳಗೊಂಡಿದೆ.
* ಸತತ 11 ವಿಚಾರಣೆಗಳ ಬಳಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
* ಫೆಬ್ರವರಿ 25 ರಂದು ದೈನಂದಿನ ವಿಚಾರಣೆಯಲ್ಲಿ ವಾದ ಮತ್ತು ಪ್ರತಿವಾದಗಳ ನಂತರ ಹೈಕೋರ್ಟ್ ತನ್ನ ತೀರ್ಪನ್ನು ಮಾರ್ಚ್ 15ಕ್ಕೆ ಕಾಯ್ದಿರಿಸಿತ್ತು.
* ಫೆಬ್ರವರಿ 10 ರಿಂದ ಪೀಠವು ದಿನದಿಂದ ದಿನಕ್ಕೆ ಪ್ರಕರಣದ ವಿಚಾರಣೆ ನಡೆಸುತ್ತಿದೆ.
* ಶಾಲಾ ಸಮವಸ್ತ್ರದೊಂದಿಗೆ ತರಗತಿಯ ಒಳಗೂ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ಹುಡುಗಿಯರು ಸಲ್ಲಿಸಿದ ಅರ್ಜಿಯ ಮೇರೆಗೆ ಫೆಬ್ರವರಿ 9 ರಂದು ಪೀಠವನ್ನು ರಚಿಸಲಾಯಿತು.

For Quick Alerts
ALLOW NOTIFICATIONS  
For Daily Alerts

English summary
Hijab row decision will announce tomorrow. Due to that section 144 to be imposed in bengaluru for a week from march 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X